ಆಶ್ರಮದಲ್ಲೇ ಸ್ವಾಮೀಜಿಯಿಂದಲೇ ಅನಾಥ ಬಾಲಕಿಯ ಅತ್ಯಾಚಾರ: ಬೆಚ್ಚಿಬೀಳಿಸಿದ ಸಂತ್ರಸ್ತೆಯ ನೋವಿನ ಮಾತು..!
15 ವರ್ಷದ ಅನಾಥ ಬಾಲಕಿ ಮೇಲೆ ಹಲವು ತಿಂಗಳುಗಳಿಂದ
ತಾನೇ ನಡೆಸುತ್ತಿದ್ದ ಆಶ್ರಮದಲ್ಲಿ ಅತ್ಯಾಚಾರ ಮಾಡಿರುವ ಆರೋಪದ ಮೇಲೆ ಆಂಧ್ರಪ್ರದೇಶದಲ್ಲಿ ಸ್ವಾಮೀಜಿಯನ್ನು ಬಂಧಿಸಿದ ಘಟನೆ ವಿಶಾಖಪಟ್ಟಣದಲ್ಲಿನ ಆಶ್ರಮದಲ್ಲಿ ನಡೆದಿದೆ.
ಸಂತ್ರಸ್ತ ಬಾಲಕಿ ಜೂನ್ 13ರಂದು ಆಶ್ರಮದಿಂದ ತಪ್ಪಿಸಿಕೊಂಡು ಹೋಗಿದ್ದಳು. ಈ ಬಗ್ಗೆ ಪೊಲೀಸರು ನಾಪತ್ತೆಯ ದೂರನ್ನು ದಾಖಲಿಸಿಕೊಂಡಿದ್ದರು. ಬಳಿಕ ಬಾಲಕಿ ವಿಜಯವಾಡ ತಲುಪಿ ಆಶ್ರಮದ ಸ್ವಾಮೀಜಿ ಪೂರ್ಣಾನಂದ ಸರಸ್ವತಿ ವಿರುದ್ಧ ದೂರು ನೀಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಬಾಲಕಿಯ ಪೋಷಕರು ಆಕೆ ಚಿಕ್ಕವಳಿದ್ದಾಗಲೇ ಸಾವನ್ನಪ್ಪಿದ್ದರು. ಬಳಿಕ ಆಕೆಯ ಅಜ್ಜಿ 2 ವರ್ಷಗಳ ಹಿಂದೆ ಆಶ್ರಮದಲ್ಲಿ ಅವಳನ್ನು ಬಿಟ್ಟು ಹೋಗಿರುವುದಾಗಿ ತಿಳಿಸಿದ್ದಾಳೆ. ಕಳೆದ ಹಲವು ತಿಂಗಳುಗಳಿಂದ ಪೂರ್ಣಾನಂದ ಸರಸ್ವತಿ ತನಗೆ ಪದೇ ಪದೇ ಹಿಂಸೆ ನೀಡುತ್ತಿದ್ದರು ಹಾಗೂ ಲೈಂಗಿಕ ಕಿರುಕುಳ ನೀಡುತ್ತಿದ್ದರು ಎಂದು ಬಾಲಕಿ ದೂರು ನೀಡಿದ್ದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.
ಇದೀಗ ಪೊಲೀಸರು ಈ ಬಗ್ಗೆ ತನಿಖೆ ಕೈಗೊಂಡಿದ್ದು, ಪೂರ್ಣಾನಂದ ಸರಸ್ವತಿ ಅವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಬಾಲಕಿಗೆ ಪೋಷಕರಿಲ್ಲದ ಕಾರಣ ಆಕೆಯ ಪರಿಸ್ಥಿತಿಯ ಲಾಭ ಪಡೆದುಕೊಳ್ಳಲಾಗಿದೆ. ಪೂರ್ಣಾನಂದ ಸರಸ್ವತಿ ಕಳೆದ ಹಲವು ತಿಂಗಳುಗಳಿಂದ ಆಶ್ರಮದಲ್ಲಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾಗಿ ಆರೋಪಿಸಲಾಗಿದೆ. ಅವರ ವಿರುದ್ಧ ಭಾರತೀಯ ದಂಡಸಂಹಿತೆ ಹಾಗೂ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw