ಆಂಧ್ರಪ್ರದೇಶ:  ಪ್ರವಾಹದ ಪರಿಣಾಮ 25 ಮಂದಿ ಸಾವು, 17ಕ್ಕೂ ಅಧಿಕ ಮಂದಿ ನಾಪತ್ತೆ 20 ಸಾವಿರಕ್ಕೂ ಅಧಿಕ ಮಂದಿಯ ಸ್ಥಳಾಂತರ - Mahanayaka
1:04 AM Wednesday 11 - December 2024

ಆಂಧ್ರಪ್ರದೇಶ:  ಪ್ರವಾಹದ ಪರಿಣಾಮ 25 ಮಂದಿ ಸಾವು, 17ಕ್ಕೂ ಅಧಿಕ ಮಂದಿ ನಾಪತ್ತೆ 20 ಸಾವಿರಕ್ಕೂ ಅಧಿಕ ಮಂದಿಯ ಸ್ಥಳಾಂತರ

andrapardesh rain
21/11/2021

ಆಂಧ್ರಪ್ರದೇಶ:  ದಕ್ಷಿಣ ಆಂಧ್ರಪ್ರದೇಶದ ರಾಯಲ್ ಸೀಮೆ ಭಾಗದ ಜಿಲ್ಲೆಗಳಾದ ಚಿತ್ತೂರು, ಕಡಪ, ನೆಲ್ಲೂರು ಮತ್ತು ಅನಂತಪುರ ಜಿಲ್ಲೆಗಳು ಮಳೆ ಹಾಗೂ ಪ್ರವಾಹದಿಂದ ತತ್ತರಿಸಿದ್ದು,  25 ಮಂದಿ ಸಾವಿಗೀಡಾಗಿದ್ದರೆ, 17ಕ್ಕೂ ಅಧಿಕ ಜನರು ನಾಪತ್ತೆಯಾಗಿದ್ದಾರೆ.

ಈಗಾಗಲೇ 20 ಸಾವಿರಕ್ಕೂ ಅಧಿಕ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಗೊಳಿಸಲಾಗಿದೆ. ನಾಪತ್ತೆಯಾಗಿರುವವ ಇನ್ನೂ ಕೂಡ ಪತ್ತೆಯಾಗದ ಹಿನ್ನೆಲೆಯಲ್ಲ ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ. ಪ್ರವಾಹದ ಹಿನ್ನೆಲೆಯಲ್ಲಿ ಜಾನುವಾರುಗಳು ಕೂಡ ನೀರಿನಲ್ಲಿ ಕೊಚ್ಚಿ ಹೋಗಿವೆ. ಸಾಕಷ್ಟು ಆಸ್ತಿಪಾಸ್ತಿಗಳು ನಷ್ಟವಾಗಿದೆ ಎಂದು ಎಂದು ತಿಳಿದು ಬಂದಿದೆ.

ಭಾರತೀಯ ವಾಯುಪಡೆ, ಎನ್ ಡಿಆರ್ ಎಫ್, ಎಸ್ ಡಿಆರ್ ಎಫ್, ಪೊಲೀಸ್ ಮತ್ತು ಅಗ್ನಿಶಾಮಕ ಸೇವೆಗಳ ಸಿಬ್ಬಂದಿ, ಪರಿಹಾರ ಕಾರ್ಯಗಳಲ್ಲಿ ಹಗಲಿರುಳೆನ್ನದೇ ನಿರಂತರವಾಗಿ ಕಾರ್ಯಾಚರಣೆ ನಡೆಸುತ್ತಲೇ ಇದ್ದಾರೆ, ನೂರಾರು ಜನರ ಪ್ರಾಣವನ್ನು ರಕ್ಷಿಸಿದ್ದಾರೆ.

ಸಿಎಂ ವೈ.ಎಸ್.ಜಗನ್ ಮೋಹನ್ ರೆಡ್ಡಿ ಶನಿವಾರ ಪ್ರವಾಹ ಪೀಡಿತ ಪ್ರದೇಶಗಳಿಗೆ ವೈಮಾನಿಕ ಸಮೀಕ್ಷೆ ನಡೆಸಿದ್ದು, ಜಿಲ್ಲಾಧಿಕಾರಿಗಳ ಜೊತೆಗೆ ಪ್ರವಾಹ ಪರಿಸ್ಥಿತಿಯನ್ನು ಪರಿಶೀಲನೆ ನಡೆಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಒಂದೋ ಜೈಲಿಗಟ್ಟಿ ಇಲ್ಲವೇ, ಹುಚ್ಚಾಸ್ಪತ್ರೆಗೆ ಸೇರಿಸಿ: ಕಂಗನಾ ವಿರುದ್ಧ ಸಿಡಿದೆದ್ದ ಸಿಖ್ಖರು

ಗಾಂಜಾ ಮಾರಾಟ ಆರೋಪ: ಅಮೆಜಾನ್ ವಿರುದ್ಧ ದೂರು ದಾಖಲು

ಮಗುವಿಗೆ ಜನ್ಮ ನೀಡಿದ ಎಸೆಸೆಲ್ಸಿ ವಿದ್ಯಾರ್ಥಿನಿ | ಆರೋಪಿ ಅರೆಸ್ಟ್

50 ವರ್ಷಗಳ ಇತಿಹಾಸದಲ್ಲಿ ಇಂತಹ ಮಳೆ ನೋಡಿಲ್ಲ, 5 ಲಕ್ಷ ಪರಿಹಾರ ನೀಡುತ್ತೇವೆ | ಸಚಿವ ಡಾ.ಕೆ.ಸುಧಾಕರ್

“ಕೃಷಿ ಕಾಯ್ದೆ ರದ್ದು ಮಾಡುವ ಪರಿಸ್ಥಿತಿ ಬಂದೇ ಬರುತ್ತದೆ” | ನಿಜವಾಯ್ತು ರಾಹುಲ್ ಗಾಂಧಿ ಹೇಳಿಕೆ

ಭಾರೀ ಮಳೆಗೆ ಬೆಂಗಳೂರಿನಲ್ಲಿ ಕುಸಿದು ಬಿದ್ದ ಮನೆ | ಮನೆಯಲ್ಲಿದ್ದವರು ಮಾಡಿದ್ದೇನು?

ಕೃಷಿ ಕಾಯ್ದೆ ವಾಪಸ್ | ಪತ್ರಕರ್ತರ ಪ್ರಶ್ನೆಗೆ ನಿರುತ್ತರವಾಗಿ ಮುಂದೆ ನಡೆದ ಸಚಿವೆ ಶೋಭಾ ಕರಂದ್ಲಾಜೆ

ಬೆಂಗಳೂರು: ನದಿಯಂತಾದ ರಸ್ತೆ, ವ್ಯಾಪಾರ ಕಳೆದುಕೊಂಡ ವ್ಯಾಪಾರಿಗಳು | ಭಾರೀ ಮಳೆಗೆ ಜನ ಜೀವನ ಅಸ್ತವ್ಯಸ್ತ

ಇತ್ತೀಚಿನ ಸುದ್ದಿ