ಮಾತುಕತೆಯ ಮೂಲಕ ಸಮಸ್ಯೆ ಪರಿಹರಿಸಬಹುದಿತ್ತು: ಕುಸ್ತಿಪಟುಗಳಿಗೆ ಅನಿಲ್ ಕುಂಬ್ಳೆ ಬೆಂಬಲ
ಜಂತರ್ ಮಂತರ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಕುಸ್ತಿಪಟುಗಳನ್ನು ಪೊಲೀಸರು ಬಲವಂತವಾಗಿ ಸ್ಥಳ ತೆರವು ಮಾಡಿದ ರೀತಿ ನನಗೆ ಬೇಸರವಾಗಿದೆ ಎಂದು ಕ್ರಿಕೆಟಿಗ ಅನಿಲ್ ಕುಮಾರ್ ಕುಂಬ್ಳೆ ಮಂಗಳವಾರ ಹೇಳಿದ್ದಾರೆ.
ಭಾರತೀಯ ಕುಸ್ತಿ ಫೆಡರೇಷನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪದ ಮೇಲೆ ಕುಸ್ತಿಪಟುಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಮೇ 28 ರಂದು ನಮ್ಮ ಕುಸ್ತಿಪಟುಗಳ ಜತೆ ನಡೆದಿರುವ ವಿಷಯ ಕೇಳಿ ಬೇಸರವಾಯಿತು. ಸರಿಯಾದ ಮಾತುಕತೆಯ ಮೂಲಕ ಯಾವುದೇ ವಿಷಯವನ್ನೂ ಪರಿಹರಿಸಬಹುದು. ಆದಷ್ಟು ಬೇಗ ಸಮಸ್ಯೆ ಪರಿಹಾರವಾಗಲಿ ಎಂದು ಅವರು ಟ್ವೀಟ್ ಮಾಡಿದ್ದಾರೆ.
ಮಂಗಳವಾರ ಪ್ರತಿಭಟನಾ ನಿರತ ಕುಸ್ತಿಪಟುಗಳು ತಮ್ಮ ಪದಕಗಳನ್ನು ಗಂಗಾ ನದಿಗೆ ಎಸೆಯಲು ನಿರ್ಧರಿಸಿದ್ದರು. ತಾವು ಗೆದ್ದ ಪದಕಗಳನ್ನು ತೆಗೆದುಕೊಂಡು ಹರಿದ್ವಾರಕ್ಕೆ ಬಂದಿದ್ದ ವೇಳೆ ರೈತರ ನಾಯಕ ನರೇಶ್ ಟಿಕಾಯತ್ ಅವರು ಹರಿದ್ವಾರದ ಹರ್ ಕಿ ಪೌರಿ ಘಾಟ್‌ಗೆ ಆಗಮಿಸಿ ಕುಸ್ತಿಪಟುಗಳೊಂದಿಗೆ ಮಾತನಾಡಿ ಅವರು ನೀವು ಕಷ್ಟಪಟ್ಟು ಸಂಪಾದಿಸಿದ ಪದಕಗಳನ್ನು ಪವಿತ್ರ ನದಿಯಾದ ಗಂಗಾದಲ್ಲಿ ಬಿಸಾಡುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಒತ್ತಾಯಿಸಿದ ನಂತರ ಕುಸ್ತಿಪಟುಗಳು ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ.
ಈ ವೇಲೆ ಕುಸ್ತಿಪಟುಗಳು ತಮ್ಮ ಪದಕಗಳನ್ನು ಭಾರತೀಯ ಕಿಸಾನ್ ಯೂನಿಯನ್ ಅಧ್ಯಕ್ಷ ನರೇಶ್ ಟಿಕಾಯತ್ ಅವರಿಗೆ ಹಸ್ತಾಂತರಿಸಿದ್ದಾರೆ. ಐದು ದಿನಗಳಲ್ಲಿ ನ್ಯಾಯ ದೊರಕಿಸಿಕೊಡಲು ಟಿಕಾಯತ್ ಸಹಾಯ ಮಾಡಬೇಕೆಂಬ ಷರತ್ತಿನೊಂದಿಗೆ ಕುಸ್ತಿಪಟುಗಳು ತಮ್ಮ ಪದಕಗಳನ್ನು ಹಸ್ತಾಂತರಿಸಿದ್ದಾರೆ.
ಕುಸ್ತಿಪಟುಗಳ ಜೊತೆಗೆ ಸರ್ಕಾರ ನಡೆದುಕೊಂಡ ರೀತಿ ಇದೀಗ ದೇಶಾದ್ಯಂತ ಚರ್ಚೆಗೀಡಾಗಿದೆ. ವಿವಿಧ ಕ್ರೀಡಾ ವಿಭಾಗಗಳ ಕ್ರೀಡಾಪಟುಗಳು ಈ ಹೋರಾಟವನ್ನು ಬೆಂಬಲಿಸಲು ಮುಂದಾಗಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw