ಕೊವಿಡ್ ಮಾರ್ಗಸೂಚಿಗೆ ಅಂಜದೇ ಗಣೇಶೋತ್ಸವ ನಡೆಸಲು ಶಾಸಕ ಯತ್ನಾಳ್ ಕರೆ!
ವಿಜಯಪುರ: ಗಣೇಶೋತ್ಸವ ಕಾರ್ಯಕ್ರಮಕ್ಕೆ ಕೊವಿಡ್ ಮಾರ್ಗಸೂಚಿ ನಿಯಮಗಳನ್ನು ಹೇರಿರುವುದಕ್ಕೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಕ್ರೋಶ ವ್ಯಕ್ತಪಡಿಸಿದ್ದು, ಯಾರೂ ಕೂಡ ಸರ್ಕಾರದ ನಿಯಮಗಳಿಗೆ ಅಂಜದೇ ಗಣೇಶೋತ್ಸವ ಆಚರಿಸಿ ಎಂದು ಕರೆ ನೀಡಿದ್ದಾರೆ.
ಜಿಲ್ಲಾಸ್ಪತ್ರೆ ಆವರಣದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ತಜ್ಞರು ಯಾವ ಆಧಾರದ ಮೇಲೆ ವೈಜ್ಞಾನಿಕ ಮಾಹಿತಿ ಕೊಟ್ಟಿದ್ದಾರೆ ಗೊತ್ತಿಲ್ಲ. ನಮ್ಮ ಜನ ಮಾಸ್ಕ್ ಹಾಕಿಕೊಳ್ಳದೇ ಓಡಾಡುತ್ತಿದ್ದಾರೆ. ಆದರೆ, ಗಣೇಶೋತ್ಸವಕ್ಕೆ ಮಾತ್ರವೇ ಕಠಿಣ ನಿಯಮಗಳನ್ನು ಜಾರಿಗೊಳಿಸಿದ್ದಾರೆ. ಇಷ್ಟೇ ಜನ ಸೇರಬೇಕು, ಗಣಪತಿ ಕೂರಿಸುವಾಗ ಇಷ್ಟೇ ಜನ ಇರಬೇಕು ಎಂದೆಲ್ಲ ನಿಯಮಗಳನ್ನು ಹಾಕಿದ್ದಾರೆ ಎಂದು ಅವರು ಟೀಕಿಸಿದರು.
ಎಸ್ ಪಿ ಹಾಗೂ ಡಿಸಿ ಅವರು ಕೇವಲ ಹಿಂದೂ ಹಬ್ಬದ ಮೇಲೆ ಕಾನೂನು ಮಾಡಿದರೆ ನಾವು ಕೇಳುವುದಿಲ್ಲ. ಜಾಸ್ತಿ ಅಂದ್ರೆ, ನನಗೆ ಗುಂಡು ಹೊಡೆಯಬಹುದು. ನಾನು ಸತ್ತರೂ ಹೆಸರು ತಗೊಂಡು ಸಾಯಬೇಕು ಅದಕ್ಕೆ ಸಿಎಂಗೆ ಕೂಡ ಕೇಳಿದ್ದೇನೆ. ಗಣೇಶೋತ್ಸವಕ್ಕೆ ತೊಂದರೆ ಮಾಡಬಾರದು ಅಂತ. ನೀವು ಹತ್ತು ಸಾವಿರ ಜನರನ್ನು ಸೇರಿಸಿ ಸಭೆ ಮಾಡುತ್ತೀರಿ, ಗಣೇಶೋತ್ಸವಕ್ಕೆ ಮಾತ್ರ 50 ಕಂಡಿಷನ್ ಹಾಕಿದ್ದಾರೆ. ಗಣೇಶೋತ್ಸವಕ್ಕೆ ಮಾತ್ರವೇ ಕೊರೊನಾ ನೆನಪಾಗುತ್ತಾ ಎಂದು ತಾನು ಸಿಎಂ ಅವರನ್ನು ಪ್ರಶ್ನಿಸಿರುವುದಾಗಿ ಯತ್ನಾಳ್ ಹೇಳಿದರು.
ಸಾರ್ವಜನಿಕ ಗಣೇಶೋತ್ಸವ ಪ್ರತಿಷ್ಠಾಪನೆ ಮಾಡುವ ಯಾರು ಕೂಡ ಅಂಜ ಕೂಡದು ಎಂದು ಕರೆ ನೀಡಿರುವ ಅವರು ಸರ್ಕಾರದ ಕೊರೊನಾ ಮಾರ್ಗದರ್ಶಿ ನಿಯಮಗಳಿಗೆ ಆಡಳಿತ ಪಕ್ಷದಲ್ಲಿದ್ದುಕೊಂಡೇ ವಿರೋಧ ವ್ಯಕ್ತಪಡಿಸಿದ್ದಾರೆ.
ಇನ್ನಷ್ಟು ಸುದ್ದಿಗಳು…
ವಿಡಿಯೋ ಮುಂದಿಟ್ಟುಕೊಂಡು ಬಿಜೆಪಿ ಮುಖಂಡ ಚಿ.ನಾ.ರಾಮು ವಿರುದ್ಧ ಮಹಿಳೆಯಿಂದ ಬ್ಲ್ಯಾಕ್ ಮೇಲ್ | ದೂರು ದಾಖಲು
ಜಿಮ್ ನಲ್ಲಿ ಜೊತೆಯಾಗಿ ವರ್ಕೌಟ್ ಮಾಡಿದ ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ!
ಬೆಂಗಳೂರು-ಮೈಸೂರು 6 ಪಥದ ರಸ್ತೆ ನಿರ್ಮಾಣ ಪ್ರತಾಪ್ ಸಿಂಹ ಸಾಧನೆಯಲ್ಲ | ಹೆಚ್.ವಿಶ್ವನಾಥ್
ಮತ್ತೆ ಅಖಾಡಕ್ಕಿಳಿಯಲಿದ್ದಾರೆ WWE ಸೂಪರ್ ಸ್ಟಾರ್ ಸಿಎಂ ಫಂಕ್ | ಖುಷಿಯಲ್ಲಿ ಕಣ್ಣೀರು ಹಾಕಿದ ಅಭಿಮಾನಿಗಳು
ಪಾನಿಗೆ ಮೂತ್ರ ಮಾಡಿದ ಜಗ್ ಮುಳುಗಿಸಿದ ಪಾನಿಪುರಿ ಮಾರಾಟಗಾರ: ಈ ವೈರಲ್ ವಿಡಿಯೋದ ಘಟನೆ ಎಲ್ಲಿ ನಡೆದದ್ದು ಗೊತ್ತೆ?
ಬಿಜೆಪಿಯವರು ಜನಾಶೀರ್ವಾದ ಯಾತ್ರೆಯಲ್ಲ, ಕ್ಷಮೆಯಾಚನೆ ಯಾತ್ರೆ ಮಾಡಬೇಕು | ಮಾಜಿ ಸಂಸದ ಚಂದ್ರಪ್ಪ ಆಕ್ರೋಶ
ಕೊಲೆ ಆರೋಪಿ ಭವ್ಯ ಸ್ವಾಗತ: ಜೈಲಿನಿಂದ ಹೊರ ಬಂದವರೇ ಕಾಂಗ್ರೆಸ್ ಗೆ ಶ್ರೇಷ್ಠರು: ಬಿಜೆಪಿ ಟೀಕೆ