14ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ‘ಅನ್ನ’ ಚಿತ್ರ ಆಯ್ಕೆ

ಬೆಂಗಳೂರು: ಬೆಂಗಳೂರಿನಲ್ಲಿ ನಡೆಯಲಿರುವ 14ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ‘ಅನ್ನ’ ಚಿತ್ರವು ಆಯ್ಕೆಯಾಗಿದ್ದು, ಈ ಬಗ್ಗೆ ಚಿತ್ರದ ಕಾರ್ಯಕಾರಿ ನಿರ್ಮಾಪಕ ನಾಗೇಶ್ ಕಂದೇಗಾಲ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.
‘ಅನ್ನ’ ಚಿತ್ರವು ‘ಭಾರತೀಯ ಸ್ಪರ್ಧೆ’ ವಿಭಾಗದಲ್ಲಿ ಆಯ್ಕೆಯಾಗಿದೆ. ಹನೂರು ಚನ್ನಪ್ಪ ರವರ ಕಥೆ ಆಧರಿಸಿದ ಅನ್ನ ಎಂಬ ಕಥಾಸಂಕಲದಿಂದ ಆಯ್ದ ಕಥೆ ಇದಾಗಿದ್ದು, ಈ ಕಥೆಗೆ ಕನ್ನಡ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ. ಚಿತ್ರವನ್ನು ಗಗನ್ ಪಿಚ್ಚರ್ಸ್ ಬ್ಯಾನರ್ ನ ಅಡಿಯಲ್ಲಿ ಬಸವರಾಜ್ ಎಸ್ .ನಿರ್ಮಾಣ ಮಾಡಿದ್ದು, ಇಸ್ಲಾಉದ್ದಿನ್ ಎನ್.ಎಸ್.ನಿರ್ದೇಶಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಇನ್ನೂ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಚಿತ್ರವು ಆಯ್ಕೆಯಾಗಿರುವ ಬಗ್ಗೆ ಸಂತಸ ಹಂಚಿಕೊಂಡಿರುವ ನಾಗೇಶ್ ಕಂದೇಗಾಲ, ನನ್ನ ಸಿನಿಮಾ ಮಾಡಬೇಕೆಂಬ ಐದು ವರ್ಷದ ಹಂಬಲ ಸಾರ್ಥಕವಾದ ಕ್ಷಣ…. ನಾನು ಕಾರ್ಯಕಾರಿ ನಿರ್ಮಾಪಕನಾಗಿ ಮತ್ತು ಸಂಗೀತ ನಿರ್ದೇಶಕನಾಗಿ ಕೆಲಸ ಮಾಡಿರುವ ಚಿತ್ರ ‘ಅನ್ನ’ ಈ ಬಾರಿಯ 14ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿಭಾರತೀಯ ಸ್ಪರ್ಧೆ ವಿಭಾಗದಲ್ಲಿ ಆಯ್ಕೆಯಾಗಿದೆ ಎಂದಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw