ಕೊಳ್ಳೇಗಾಲ ಕಾಂಗ್ರೆಸ್ ಅಭ್ಯರ್ಥಿಯಾಗಿ ಎ.ಆರ್.ಕೃಷ್ಣಮೂರ್ತಿ ಘೋಷಣೆ
ಚಾಮರಾಜನಗರ: ಮೂವರು ಮಾಜಿ ಶಾಸಕರು ಟಿಕೆಟ್ ಆಕಾಂಕ್ಷಿಯಾಗಿದ್ದ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದಲ್ಲಿ ಎ.ಆರ್.ಕೃಷ್ಣಮೂರ್ತಿ ಅವರನ್ನು ಕಾಂಗ್ರೆಸ್ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಲಾಗಿದೆ.
ಎ.ಆರ್.ಕೃಷ್ಣಮೂರ್ತಿ ಸಿದ್ದರಾಮಯ್ಯ ಆಪ್ತ ಬಳಗದಲ್ಲಿ ಗುರುತಿಸಿಕೊಂಡ ಮಾಜಿ ಶಾಸಕರಾಗಿದ್ದರು. ಎ.ಆರ್.ಕೆ. ಜೊತೆಗೆ ಮಾಜಿ ಶಾಸಕ ಜಯಣ್ಣ ಮತ್ತೋರ್ವ ಮಾಜಿ ಶಾಸಕ ಬಾಲರಾಜು ಟಿಕೆಟ್ ಆಕಾಂಕ್ಷಿಗಳಾಗಿದ್ದರು. ಅಳೆದು-ತೂಗಿ ಕೊನೆಗೂ ಕೃಷ್ಣಮೂರ್ತಿ ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ.
ಕೊಳ್ಳೇಗಾಲ ಕ್ಷೇತ್ರದ ಟಿಕೆಟ್ ಘೋಷಣೆ ಮಾಡುವ ಮೂಲಕ ಚಾಮರಾಜನಗರ ಜಿಲ್ಲೆಯ ನಾಲ್ಕು ಕ್ಷೇತ್ರಗಳ ಕೈ ಟಿಕೆಟ್ ಫೈನಲ್ ಆದಂತಾಗಿದೆ. ಮೊದಲ ಪಟ್ಟಿಯಲ್ಲಿ ಚಾಮರಾಜನಗರದಿಂದ ಹಾಲಿ ಶಾಸಕ ಸಿ.ಪುಟ್ಟರಂಗಶೆಟ್ಟಿ, ಹನೂರುನಿಂದ ಹಾಲಿ ಶಾಸಕ ಆರ್.ನರೇಂದ್ರ ಹಾಗೂ ಗುಂಡ್ಲುಪೇಟೆಯಿಂದ ಗಣೇಶ್ ಪ್ರಸಾದ್ ಅವರನ್ನು ಘೋಷಣೆ ಮಾಡಲಾಗಿತ್ತು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw