ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಸಾವು: ಸಾವಿನ ಸಂಖ್ಯೆ 4ಕ್ಕೆ ಏರಿಕೆ
ಹುಬ್ಬಳ್ಳಿ: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು 9 ಮಂದಿ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳು ಗಾಯಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಅಯ್ಯಪ್ಪ ಮಾಲಾಧಾರಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 4ಕ್ಕೆ ಏರಿಕೆಯಾಗಿದೆ.
ಲಿಂಗರಾಜ ಬೀರನೂರ(19) ಮೃತಪಟ್ಟ ಅಯ್ಯಪ್ಪ ಮಾಲಾಧಾರಿಯಾಗಿದ್ದು, ಇತರ ಐವರಿಗೆ ಚಿಕಿತ್ಸೆ ಮುಂದುವರಿದಿದೆ.
ಹುಬ್ಬಳ್ಳಿಯ ಸಾಯಿನಗರದ ಈಶ್ವರ ದೇವಸ್ಥಾನದಲ್ಲಿ ಭಾನುವಾರ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿತ್ತು. ಒಟ್ಟು 9 ಮಂದಿ ಘಟನೆಯಲ್ಲಿ ಗಾಯಗೊಂಡಿದ್ದರು. 9 ಜನರ ಪೈಕಿ ನಿನ್ನೆ ನಿಜಲಿಂಗಪ್ಪ ಬೇಪುರಿ (58), ಸಂಜಯ್ ಸವದತ್ತಿ (18) ಸಾವನ್ನಪ್ಪಿದ್ದರೆ ಇಂದು ರಾಜು ಮೂಗೇರಿ ಎಂಬವರು ಸಾವನ್ನಪ್ಪಿದ್ದರು. ಇದೀಗ ಲಿಂಗರಾಜ ಬೀರನೂರ ಬಲಿಯಾಗಿದ್ದು, ಸಾವಿಗೀಡಾದವರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: