ಶಿರೂರು ಗುಡ್ಡ ಕುಸಿತ: ಗಂಗಾವಳಿ ನದಿಯಲ್ಲಿ ಮತ್ತೊಂದು ಮೃತದೇಹ ಪತ್ತೆ!
ಅಂಕೋಲಾ: ಶಿರೂರು ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರ ಮೃತದೇಹಗಳಿಗಾಗಿ ಶೋಧ ನಡೆಸಲಾಗುತ್ತಿದ್ದು, ಈ ನಡುವೆ ಮಂಗಳವಾರ ಮುಂಜಾನೆ ಗಂಗಾವಳಿ ನದಿ ಸಂಗಮದ ಮಂಜುಗುಣಿಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದೆ.
ಶಿರೂರು ಗುಡ್ಡ ಕುಸಿತದಲ್ಲಿ ಒಟ್ಟು ಸಾವಿನ ಸಂಖ್ಯೆ ಇದೀಗ 8ಕ್ಕೆ ಏರಿಕೆಯಾಗಿದೆ. ಇದೀಗ ಪತ್ತೆಯಾಗಿರುವ ಮೃತದೇಹ ಸಣ್ಣಿ ಗೌಡ ಎಂಬವರದ್ದಾಗಿದೆ ಎಂದು ಶಂಕಿಸಲಾಗಿದೆ.
ಶಿರೂರು ಗುಡ್ಡ ಕುಸಿತ ಪ್ರಕರಣದಲ್ಲಿ 7 ಮಂದಿಯ ಮೃತದೇಹ ಪತ್ತೆಯಾಗಿತ್ತು. ಇದೀಗ ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ಸಾವಿನ ಸಂಖ್ಯೆ ಒಟ್ಟು 8ಕ್ಕೆ ಏರಿಕೆಯಾಗಿದೆ.
ಇನ್ನೂ ಕೇರಳದ ಅರ್ಜನ್ ನ ಮೃತದೇಹಕ್ಕಾಗಿ ತೀವ್ರ ಶೋಧ ನಡೆಸಲಾಗುತ್ತಿದೆ.
ಲಾರಿಯೊಂದಿಗೆ ಅರ್ಜುನ್ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಲಾರಿ ಸಿಲುಕಿದೆ ಎನ್ನಲಾಗಿರುವ ಸ್ಥಳದಲ್ಲಿ ನಿರಂತರವಾಗಿ ಮಣ್ಣು ತೆಗೆದು ಪರಿಶೀಲನೆ ನಡೆಸಲಾಗಿದ್ದರೂ, ಇನ್ನೂ ಲಾರಿಯಾಗಲಿ ಮೃತದೇಹವಾಗಲಿ ಪತ್ತೆಯಾಗಿಲ್ಲ. ಹೀಗಾಗಿ ಅರ್ಜುನ್ ಇದ್ದ ಟಿಂಬರ್ ಲಾರಿ ಕೂಡ ನದಿಗೆ ಜಾರಿ ನಾಪತ್ತೆಯಾಗಿದೆಯೇ ಎನ್ನುವ ಶಂಕೆ ಕೂಡ ವ್ಯಕ್ತವಾಗಿದೆ. ಶೋಧ ಮುಂದವರಿದಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: