ಮತ್ತೊಂದು ಎನ್ ಕೌಂಟರ್: ಹಲವು ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿಯ ಹತ್ಯೆ!

vinod kumar upadyaya
05/01/2024

ಲಕ್ನೋ: ಹಲವು ಪ್ರಕರಣಗಳಲ್ಲಿ ಉತ್ತರ ಪ್ರದೇಶ ಪೊಲೀಸರಿಗೆ ಬೇಕಾಗಿದ್ದ ಆರೋಪಿಯೋರ್ವನನ್ನು ಉತ್ತರ ಪ್ರದೇಶ ಪೊಲೀಸರ ವಿಶೇಷ ಕಾರ್ಯಪಡೆ ಸುಲ್ತಾನ್ ಪುರ ಜಿಲ್ಲೆಯಲ್ಲಿ ಎನ್ ಕೌಂಟರ್ ನಡೆಸಿದೆ.

ವಿನೋದ್ ಕುಮಾರ್ ಉಪಾಧ್ಯಾಯ ಎನ್ ಕೌಂಟರ್ ನಲ್ಲಿ ಹತ್ಯೆಗೀಡಾದವನಾಗಿದ್ದಾನೆ. ಈತನ ಪತ್ತೆಗೆ 1 ಲಕ್ಷ ರೂಪಾಯಿ ಬಹುಮಾನ ಕೂಡ ಘೋಷಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ವಿಶೇಷ ಕಾರ್ಯಪಡೆಯೊಂದಿಗಿನ ಎನ್ ಕೌಂಟರ್ ನಲ್ಲಿ ಉಪಾಧ್ಯಾಯ ಗಾಯಗೊಂಡಿದ್ದ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ಎಸ್ ಟಿಎ ನ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಮಿತಾಬ್ ಯಶ್ ತಿಳಿಸಿದ್ದಾರೆ.

ಗೋರಖ್ಪುರ, ಬಸ್ತಿ, ಸಂತ ಕಬೀರ್ ನಗರ ಮತ್ತು ಲಕ್ನೋದಲ್ಲಿ ಉಪಾಧ್ಯಾಯ ವಿರುದ್ಧ 35 ಘೋರ ಅಪರಾಧಗಳ ಪ್ರಕರಣಗಳು ದಾಖಲಾಗಿತ್ತು. 2023ರ ಸೆಪ್ಟೆಂಬರ್ನಲ್ಲಿ ಗೋರಖ್ ಪುರ ಪೊಲೀಸರು ಆತನ ಸುಳಿವು ನೀಡಿದವರಿಗೆ 1 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದರು ಆತನ ಬಳಿಇದ್ದ ಪಿಸ್ತೂಲು ಸೇರಿ ಹಲವು ಮಾರಕಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ.

ಇತ್ತೀಚಿನ ಸುದ್ದಿ

Exit mobile version