ತಾಯಿಯ ಗರ್ಭದಲ್ಲಿರುವ ಶಿಶುವಿನೊಳಗೆ ಮತ್ತೊಂದು ಭ್ರೂಣ ಪತ್ತೆ! - Mahanayaka

ತಾಯಿಯ ಗರ್ಭದಲ್ಲಿರುವ ಶಿಶುವಿನೊಳಗೆ ಮತ್ತೊಂದು ಭ್ರೂಣ ಪತ್ತೆ!

embryo
29/01/2025

ಮಹಾರಾಷ್ಟ್ರ: ತಾಯಿಯ ಗರ್ಭದೊಳಗಿರುವ ಪುಟ್ಟ ಮಗುವಿನೊಳಗೂ ಭ್ರೂಣ ಪತ್ತೆಯಾಗಿರುವ ಅಪರೂಪದ ಘಟನೆಯೊಂದು ಮಹಾರಾಷ್ಟ್ರದಲ್ಲಿ ನಡೆದಿದ್ದು, ವೈದ್ಯಕೀಯ ಲೋಕವೇ ಅಚ್ಚರಿಪಡುವಂತಾಗಿದೆ.


Provided by

32 ವರ್ಷ ವಯಸ್ಸಿನ ಗರ್ಭಿಣಿ ಮಹಿಳೆಯೊಬ್ಬರಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಸೋನೋಗ್ರಫಿ ನಡೆಸಿದ ವೇಳೆ ಈ ಘಟನೆ ಬೆಳಕಿಗೆ ಬಂದಿದೆ. ಭಾರತದಲ್ಲಿ ಕೇವಲ 15ರಿಂದ 20 ಇಂತಹ ಪ್ರಕರಣಗಳು ಈವರೆಗೆ ವರದಿಯಾಗಿವೆ.

ಮಹಿಳೆಗೆ 9 ತಿಂಗಳುಗಳಾಗಿವೆ, ಆಕೆ ಇನ್ನು ಕೆಲವೇ ದಿನಗಳಲ್ಲಿ ಮಗುವಿಗೆ ಜನ್ಮ ನೀಡಲಿದ್ದಾರೆ. ಈ ಹಿಂದೆ ಮಾಡಲಾದ ಯಾವುದೇ ಸ್ಕ್ಯಾನಿಂಗ್ ಗಳಲ್ಲೂ ಇದು ಪತ್ತೆಯಾಗಿರಲಿಲ್ಲ ಎಂದು ವೈದ್ಯರಾದ ಡಾ.ಪ್ರಸಾದ್ ಅಗರ್ವಾಲ್ ತಿಳಿಸಿದ್ದಾರೆ.


Provided by

ಅವಳಿಗಳ ಬೆಳವಣಿಗೆಯ ಸಂದರ್ಭಗಳಲ್ಲಿ ಈ ರೀತಿಯ ಸ್ಥಿತಿಗಳು ಉಂಟಾಗುತ್ತವೆ ಎಂದು ವೈದ್ಯರು ಅಭಿಪ್ರಾಯಪಟ್ಟಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ