ರಾಜ್ಯದಲ್ಲಿ ಮತ್ತೊಂದು ಪಟಾಕಿ ದುರಂತ: ಓರ್ವ ಕಾರ್ಮಿಕ ಸಾವು, ಮತ್ತೋರ್ವನ ಸ್ಥಿತಿ ಗಂಭೀರ

ಮಂಡ್ಯ: ರಾಜ್ಯದಲ್ಲಿ ಮತ್ತೊಂದು ಪಟಾಕಿ ಸ್ಟೋಟ ದುರಂತ ಸಂಭವಿಸಿದ್ದು, ಘಟನೆಯಲ್ಲಿ ಓರ್ವ ಸಾವನ್ನಪ್ಪಿ ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ.
ಮಂಡ್ಯ ತಾಲೂಕಿನ ಜಿ ಕೆಬ್ಬಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ತಮಿಳುನಾಡಿನ ಮೂಲದ ಕಾರ್ಮಿಕ ರಮೇಶ್ (67) ಮೃತಪಟ್ಟವರು ಎಂದು ಗುರುತಿಸಲಾಗಿದೆ. ನಾಗಲಿಂಗ ಎನ್ನುವ ಮತ್ತೋರ್ವನಿಗೆ ಗಂಭೀರವಾಗಿ ಗಾಯವಾಗಿದ್ದು, ಆತನನ್ನು ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗ್ರಾಮದಲ್ಲಿ ಕಾಲಭೈರವೇಶ್ವರ ಹಬ್ಬಕ್ಕೆಂದು ಪಟಾಕಿ ಸಿಡಿಸಲು ತಮಿಳುನಾಡಿನಿಂದ ನಾಲ್ವರು ಆಗಮಿಸಿದ್ದರು. ನಿನ್ನೆ ರಾತ್ರಿ ಗ್ರಾಮದಲ್ಲಿ ಹಬ್ಬ ನೆರವೇರಿದೆ. ಬಳಿಕ ಗ್ರಾಮದ ಆಲೆಮನೆಯೊಂದರಲ್ಲಿ ನಾಲ್ವರು ತಂಗಿದ್ದರು. ಆದ್ರೆ, ಇಂದು ಬೇರೆ ಗ್ರಾಮಕ್ಕೆ ತೆರಳಲು ಪಟಾಕಿಗಳನ್ನು ತುಂಬುತ್ತಿದ್ದ ವೇಳೆ ಆಕಸ್ಮಿಕವಾಗಿ ಪಟಾಕಿ ಸ್ಫೋಟಗೊಂಡಿದೆ.
ಸ್ಫೋಟದ ತೀವ್ರತೆಗೆ ಮನೆಯ ಹೆಂಚುಗಳು ಹಾರಿ ಹೋಗಿದ್ದು, ಮನೆ ಹೊತ್ತಿ ಉರಿದಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕದಳ ಆಗಮಿಸಿ ಬೆಂಕಿ ನಂದಿಸಿದೆ.
ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ್, ಎಸ್ ಪಿ ಯತೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth