ಬೆಂಗಳೂರಿನಲ್ಲಿ ಮತ್ತೊಂದು ಸರಣಿ ಅಪಘಾತ: ಬಸ್, ಆಟೋ ಸಂಪೂರ್ಣ ಜಖಂ
ಬೆಂಗಳೂರು: ನೆಲಮಂಗಲದಲ್ಲಿ ಇತ್ತೀಚೆಗೆ ನಡೆದ ಸರಣಿ ಅಪಘಾತದಲ್ಲಿ 6 ಮಂದಿ ಮೃತಪಟ್ಟ ಘಟನೆ ಮಾಸುವ ಮುನ್ನವೇ ನಗರದ ಜ್ಞಾನಭಾರತಿ ಮೆಟ್ರೋ ನಿಲ್ದಾಣದ ಬಳಿಯಲ್ಲಿ ಮತ್ತೊಂದು ಸರಣಿ ಅಪಘಾತ ಸಂಭವಿಸಿದೆ.
ಆಟೋ ಚಾಲಕ ಕೆಎಸ್ ಆರ್ ಟಿಸಿ(KSRTC) ಬಸ್ ನ್ನು ಓವರ್ ಟೇಕ್ ಮಾಡಲು ಯತ್ನಿಸಿದ್ದು, ಈ ವೇಳೆ ಆಟೋ ಹಾಗೂ ಬಸ್ ನಡುವೆ ಭೀಕರ ಅಪಘಾತ ನಡೆದಿದೆ. ಬಸ್ ಡಿವೈಡರ್ ಗೆ ಡಿಕ್ಕಿ ಹೊಡೆದು ಮುನ್ನುಗ್ಗಿದ ಪರಿಣಾಮ ಪಕ್ಕದಲ್ಲಿದ್ದ ವಾಹನಗಳಿಗೂ ಹಾನಿಯಾಗಿದೆ.
ಅಪಘಾತದಲ್ಲಿ ಕೆಎಸ್ ಆರ್ ಟಿಸಿ ಬಸ್ ಜಖಂಗೊಂಡಿದೆ. 1 ಎಲೆಕ್ಟ್ರಿಕ್ ಕೆಎಸ್ ಆರ್ ಟಿಸಿ ಬಸ್ , ಇನ್ನೊಂದು ಕೆಂಪು ಕೆಎಸ್ ಆರ್ ಟಿಸಿ ಬಸ್ ಮತ್ತು ಕಾರು ಹಾಗೂ ಆಟೋ ಸಂಪೂರ್ಣ ಜಖಂಗೊಂಡಿದೆ.
ಘಟನೆಯಲ್ಲಿ ಇಬ್ಬರು ಚಾಲಕರಿಗೆ ಗಂಭೀರವಾಘಿ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/HEkqDgrW2BlJLad5kZ1DX7