ಮೆಟ್ರೋ ಕಾಮಗಾರಿ ವೇಳೆ ಮತ್ತೊಂದು ದುರಂತ: ಆಟೋ ಮೇಲೆ ವಯಾಡೆಕ್ಟ್ ಉರುಳಿ ಬಿದ್ದು ಚಾಲಕ ಸಾವು - Mahanayaka
10:45 AM Wednesday 16 - April 2025

ಮೆಟ್ರೋ ಕಾಮಗಾರಿ ವೇಳೆ ಮತ್ತೊಂದು ದುರಂತ: ಆಟೋ ಮೇಲೆ ವಯಾಡೆಕ್ಟ್ ಉರುಳಿ ಬಿದ್ದು ಚಾಲಕ ಸಾವು

namma mettro
16/04/2025

ಬೆಂಗಳೂರು: ನಮ್ಮ ಮೆಟ್ರೋ ಕಾಮಗಾರಿ ವೇಳೆ ವಯಾಡೆಕ್ಟ್(ಸಿಮೆಂಟ್‌ ಗೋಡೆ)  ಉರುಳಿ ಬಿದ್ದು, ಓರ್ವ ಆಟೋ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕೋಗಿಲು ಕ್ರಾಸ್ ಬಳಿ ನಡೆದಿದೆ.


Provided by

ಖಾಸಿಂ ಸಾಬ್ ಮೃತ ಆಟೋ ಚಾಲಕ. ಈತ ಮೂಲತಃ ಹೆಗಡೆನಗರದ ನಿವಾಸಿ. ಪ್ಯಾಸೆಂಜರ್ ಪಿಕ್ ಮಾಡಿಕೊಂಡು ನಾಗವಾರದ ಕಡೆಗೆ ಹೋಗುತ್ತಿದ್ದ ವೇಳೆ ದುರಂತ ಸಂಭವಿಸಿದೆ. ತಡರಾತ್ರಿ 12:05 ಗಂಟೆ ಸುಮಾರಿಗೆ ಘಟನೆ ಸಂಭವಿಸಿದೆ. ಆದರೆ ಆಟೋದಲ್ಲಿದ್ದ ಪ್ಯಾಸೆಂಜರ್‌ ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಏರ್ಪೋಟ್ ಮಾರ್ಗದ ಮೆಟ್ರೋ ಕಾಮಗಾರಿಗಾಗಿ 18 ಚಕ್ರದ ದೊಡ್ಡ ಲಾರಿಯಲ್ಲಿ ವಯಾಡೆಕ್ಟ್ ತೆಗೆದುಕೊಂಡು ಹೋಗಲಾಗುತ್ತಿತ್ತು. ಕೋಗಿಲು ಕ್ರಾಸ್‌ ನಲ್ಲಿ ತಿರುವು ತೆಗೆದುಕೊಳ್ಳುವ ವೇಳೆ ಲಾರಿಯೇ ಎರಡು ತುಂಡಾಗಿದೆ. ಪರಿಣಾಮ ವಯಾಡೆಕ್ಟ್‌ ನೆಲಕ್ಕುರುಳಿದೆ.

ಇದನ್ನು ತಕ್ಷಣವೇ ಗಮನಿಸಿದ ಪ್ಯಾಸೆಂಜರ್ ಆಟೋದಿಂದ ಇಳಿದು ಓಡಿದ್ದಾರೆ. ಆದರೆ ಆಟೋ ಚಾಲಕನಿಗೆ ಓಡುವಷ್ಟು ಸಮಯ ಸಿಗದೇ  ಆಟೋ ಮೇಲೆಯೇ ವಯಾಡೆಕ್ಟ್‌ ಉರುಳಿ ಬಿದ್ದಿದ್ದು, ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಆಟೋ ಅಪ್ಪಚ್ಚಿಯಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ