ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಅನೈತಿಕ ಪೊಲೀಸ್ ಗಿರಿ:  ಎಲ್ಲಿದೆ ಆ್ಯಂಟಿ ಕಮ್ಯುನಲ್ ವಿಂಗ್? - Mahanayaka
10:28 PM Thursday 12 - December 2024

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಅನೈತಿಕ ಪೊಲೀಸ್ ಗಿರಿ:  ಎಲ್ಲಿದೆ ಆ್ಯಂಟಿ ಕಮ್ಯುನಲ್ ವಿಂಗ್?

dakshinakannada
03/08/2023

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಅನೈತಿಕ ಪೊಲೀಸ್ ಗಿರಿ ಪ್ರಕರಣ ಬೆಳಕಿಗೆ ಬಂದಿದೆ. ಕಾನೂನನ್ನು ಕೈಗೆತ್ತಿಕೊಂಡ್ರೆ ಕಠಿಣ ಶಿಕ್ಷೆ ನೀಡಲಾಗುತ್ತದೆ ಎಂದು ಮೊನ್ನೆಯಷ್ಟೇ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ದಿನೇಶ್ ಗುಂಡೂರಾವ್ ಮಂಗಳೂರಲ್ಲಿ ಎಚ್ಚರಿಕೆ ನೀಡಿದ ಬೆನ್ನಲ್ಲೇ ಧರ್ಮಸ್ಥಳ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಕ್ಕೆ ಬಾಡಿಗೆಗೆ ಹೋಗಿದ್ದ ಉಜಿರೆಯ ಆಟೋ ರಿಕ್ಷಾ ಚಾಲಕನಿಗೆ ತಂಡವೊಂದು ತೀವ್ರ ಹಲ್ಲೆ ನಡೆಸಿದ ಘಟನೆ ಬೆಳಕಿಗೆ ಬಂದಿದೆ.

ಉಜಿರ ಹಳೆ ಪೇಟೆ ನಿವಾಸಿ ಮುಹಮ್ಮದ್ ಆಶಿಕ್ ಹಲ್ಲೆಗೊಳಗಾದ ಯುವಕ. ಆಶಿಕ್ ತನ್ನ ಆಟೋದಲ್ಲಿ ರಾತ್ರಿ ಧರ್ಮಸ್ಥಳ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಕ್ಕೆ ಬಾಡಿಗೆ ಹೋಗಿ ಹಿಂದಿರುಗುತ್ತಿದ್ದ ವೇಳೆ ಈ ಹಲ್ಲೆ ನಡೆದಿದೆ.

ನಾಲ್ವರ ತಂಡವೊಂದು ಧರ್ಮಸ್ಥಳ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಸಮೀಪವೇ ರಿಕ್ಷಾವನ್ನು ತಡೆದು ಆಶಿಕ್ ಮೇಳೆ ಯದ್ವಾತದ್ವಾ ಹಲ್ಲೆ ಮಾಡಿದೆ. ಮಾರಣಾಂತಿಕ ಹಲ್ಲೆಗೊಳಗಾದ ಮುಹಮ್ಮದ್ ಆಶಿಕ್ ಅವರನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇನ್ನೂ ಆ್ಯಂಟಿ ಕಮ್ಯುನಲ್ ವಿಂಗ್ ರಚನೆ ಮಾಡಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಅನೈತಿಕ ಪೊಲೀಸ್ ಗಿರಿಯನ್ನು ತಡೆಗಟ್ಟುತ್ತೇವೆ ಎಂದು ಸರ್ಕಾರ, ಗೃಹ ಸಚಿವರು ಹೇಳಿದ್ದಾರೆ. ಆದ್ರೆ… ದಿನಕ್ಕೊಂದರಂತೆ ಪ್ರಕರಣ ನಡೆಯುತ್ತಿದ್ದರೂ, ಅನೈತಿಕ ಪೊಲೀಸ್ ಗಿರಿ ನಿಯಂತ್ರಿಸಲು ಸಾಧ್ಯವಾಗಿಲ್ಲ. ಎಲ್ಲಿದೆ ಆ್ಯಂಟಿ ಕಮ್ಯುನಲ್ ವಿಂಗ್ ಎನ್ನುವ ಪ್ರಶ್ನೆ ಕರಾವಳಿಯಾದ್ಯಂತ ಕೇಳಿ ಬಂದಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ