ಚಿಕ್ಕಮಗಳೂರಿನಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿ: ತಮಿಳುನಾಡು ಮೂಲದ ಕಾರ್ಮಿಕ ಸಾವು
ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ಕಾಡಾನೆ ಮತ್ತೊಂದು ಬಲಿ ಪಡೆದುಕೊಂಡಿದ್ದು, ತೋಟಕ್ಕೆ ತೆರಳುತ್ತಿದ್ದ ಕಾರ್ಮಿಕನ ಮೇಲೆ ಎರಗಿದ ಒಂಟಿ ಸಲಗ ಕಾರ್ಮಿಕನನ್ನು ಹತ್ಯೆ ಮಾಡಿದೆ.
ಶ್ರೀಧರ್ ಎಂಬ ತಮಿಳುನಾಡು ಮೂಲದ ಕಾರ್ಮಿಕ ಕಾಡಾನೆ ದಾಳಿಗೆ ಬಲಿಯಾದ ವ್ಯಕ್ತಿಯಾಗಿದ್ದಾರೆ. ತಮಿಳುನಾಡಿನಿಂದ ಕಾಫಿ ತೋಟದ ಕೆಲಸಕ್ಕೆ ಕುಟುಂಬ ಸಹಿತವಾಗಿ ಶ್ರೀಧರ್ ಆಗಮಿಸಿದ್ದರು. ಇದೀಗ ಕಾಡಾನೆ ದಾಳಿಗೆ ಬಲಿಯಾಗಿದ್ದು, ಕುಟುಂಬಸ್ಥರ ರೋದನೆ ಮುಗಿಲು ಮುಟ್ಟಿದೆ.
ಕಾಡಾನೆ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಶ್ರೀಧರ್ ಅವರನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಲು ಯತ್ನಿಸಲಾಯಿತು. ಆದ್ರೆ ಆಸ್ಪತ್ರೆಯ ದಾರಿ ಮಧ್ಯೆ ಅವರು ಕೊನೆಯುಸಿರೆಳೆದಿದ್ದಾರೆ.
ಕೆ.ಆರ್.ಪೇಟೆ, ಕೆಂಚೇನಹಳ್ಳಿ ಸುತ್ತಮುತ್ತ ಓಡಾಡುತ್ತಿರುವ ಒಂಟಿ ಸಲಗ ದಾಳಿ ನಡೆಸಿದೆ ಎನ್ನಲಾಗಿದೆ. ಕಳೆದ ಎರಡು ವರ್ಷದಲ್ಲಿ ಆನೆ ದಾಳಿಗೆ ಐದಕ್ಕೂ ಹೆಚ್ಚು ಜನ ಬಲಿಯಾಗಿದ್ದಾರೆ ಎಂದು ಇದೇ ವೇಳೆ ಅರಣ್ಯ ಇಲಾಖೆ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಚಿಕ್ಕಮಗಳೂರು ತಾಲೂಕಿನ ಕೆಂಚೇನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ತಮ್ಮ ಕುಟುಂಬದ ಸದಸ್ಯನನ್ನು ಕಳೆದುಕೊಂಡ ಕುಟುಂಬಸ್ಥರ ರೋದನೆ ಮುಗಿಲು ಮುಟ್ಟಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth