ಮಂಗನ ಕಾಯಿಲೆಗೆ ಮತ್ತೊಂದು ಬಲಿ: ಉಸಿರು ಚೆಲ್ಲಿದ 68ರ ವೃದ್ಧೆ!

ಚಿಕ್ಕಮಗಳೂರು: ಮಂಗನ ಕಾಯಿಲೆಗೆ ಕಾಫಿನಾಡಿನಲ್ಲಿ ಮತ್ತೊಂದು ಬಲಿಯಾಗಿದ್ದು, ಮಂಗನ ಕಾಯಿಲೆಯಿಂದ ಬಳಲುತ್ತಿದ್ದ 68 ವರ್ಷದ ವೃದ್ಧೆ ಸಾವನ್ನಪ್ಪಿದ್ದಾರೆ.
ಕೊಪ್ಪ ತಾಲೂಕಿನ ಬಿಂತ್ರವಳ್ಳಿ ಗ್ರಾಮದ ರತ್ನ (68) ಸಾವನ್ನಪ್ಪಿದವರಾಗಿದ್ದಾರೆ. ರತ್ನ ತೀವ್ರ ಜ್ವರದಿಂದ ಬಳಲುತ್ತಿದ್ದು, ಜ್ವರ ಉಲ್ಬಣಗೊಂಡು ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ರಕ್ತ ಪರೀಕ್ಷೆಯಲ್ಲಿ ಮಂಗನ ಕಾಯಿಲೆ ದೃಢವಾಗಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೇ ಅವರು ಕೊನೆಯುಸಿರೆಳೆದಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಂಗನ ಕಾಯಿಲೆಗೆ ಬಲಿಯಾದವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. ಮಲೆನಾಡು ಭಾಗದಲ್ಲಿ ದಿನದಿಂದ ದಿನಕ್ಕೆ ಮಂಗನಕಾಯಿಲೆ ಭೀತಿ ಹೆಚ್ಚುತ್ತಿದೆ.
ಕೊಪ್ಪ , N.R ಪುರ, ಶೃಂಗೇರಿ ತಾಲೂಕಿನಲ್ಲಿ KFD(ಮಂಗನ ಕಾಯಿಲೆ) ಹೆಚ್ಚುತ್ತಿದೆ. 11 KFD ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth