ಇನ್ನೇನು ಅಂತ್ಯಕ್ರಿಯೆ ಮಾಡಬೇಕು ಅನ್ನೋವಷ್ಟರಲ್ಲಿ ಎಣ್ಣೆ ಹೊಡೆದು ತೂರಾಡುತ್ತಾ ಬಂದ ಸತ್ತ ವ್ಯಕ್ತಿ!
ಕೊಟ್ಟಾಯಂ: ಕೊಟ್ಟಾಯಂ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಆವರಣದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಇದೇ ವೇಳೆ ಮೃತದೇಹವನ್ನು ಪೊಲೀಸರು ವಾರಸುದಾರರಿಗೆ ಹಸ್ತಾಂತರಿಸಿದ್ದಾರೆ.
ಇತ್ತ ಮೃತದೇಹವನ್ನು ಮನೆಗೆ ತಂದ ಕುಟುಂಬಸ್ಥರು ಅಂತ್ಯಕ್ರಿಯೆ ನಡೆಸಲು ಸಿದ್ಧತೆ ನಡೆಸಿದ್ದು, ಇದೇ ವೇಳೆ ಸತ್ತಿದ್ದಾನೆ ಎಂದು ಹೇಳಲಾಗಿದ್ದ ವ್ಯಕ್ತಿ ಬಾರ್ ನಲ್ಲಿ ಕಂಠಮಟ್ಟ ಕುಡಿದು ತೂರಾಡುತ್ತಾ, ಬಂದಿದ್ದು, ಸಂಬಂಧಿಕರನ್ನು ಬೆಚ್ಚಿಬೀಳಿಸಿದ್ದಾನೆ.
ಈ ಘಟನೆ ನಡೆದಿರುವುದು ಕೇರಳದ ಕೊಟ್ಟಾಯಂನಲ್ಲಿ. ಇಲ್ಲಿನ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಹಳೆ ಒಪಿ ವಿಭಾಗದ ವರಾಂಡಾದಲ್ಲಿ ಮೃತದೇಹ ಪತ್ತೆಯಾಗಿತ್ತು. ಪೊಲೀಸರು ತನಿಖೆ ನಡೆಸಿದಾಗ ಕುಟುಂಬಸ್ಥರು ಬಂದು, ಗುರುತು ಪತ್ತೆ ಮಾಡಿದ್ದರು.
ಅಂತ್ಯ ಸಂಸ್ಕಾರಕ್ಕೆ ಸಂಬಂಧಿಕರು ಆಗಮಿಸುತ್ತಿದ್ದ ವೇಳೆ ಮೃತಪಟ್ಟಿದ್ದಾನೆ ಎನ್ನಲಾಗಿರುವ ವ್ಯಕ್ತಿ ಬಾರ್ ನಲ್ಲಿ ಎಣ್ಣೆ ಹೊಡೆದು ತೂರಾಡುತ್ತಿರುವುದು ಪತ್ತೆಯಾಗಿದೆ. ಕುಟುಂಬಸ್ಥರ ಮನೆಗೆ ಬಂದ ಸಂಬಂಧಿಗಳು, ನಾವು ಆತನನ್ನು ನೋಡಿದ್ದೇವೆ ಎಂದು ಹೇಳಿದ್ದರಿಂದಾಗಿ ಹುಡುಕಾಟ ನಡೆಸಿದಾಗ ಮೃತಪಟ್ಟಿದ್ದಾನೆ ಎನ್ನಲಾಗಿದ್ದ ವ್ಯಕ್ತಿ ಪತ್ತೆಯಾಗಿದ್ದಾನೆ.
ಈ ವಿಚಾರ ತಿಳಿಯುತ್ತಿದ್ದಂತೆಯೇ ಸಂಬಂಧಿಕರು ವ್ಯಕ್ತಿಯನ್ನು ನೇರವಾಗಿ ಪೊಲೀಸ್ ಠಾಣೆಗೆ ಕರೆದೊಯ್ದು ನಡೆದ ವಿಚಾರ ತಿಳಿಸಿದ್ದಾರೆ. ಇದೀಗ ಪೊಲೀಸರು ಮೃತ ವ್ಯಕ್ತಿ ಯಾರು ಎಂದು ಮತ್ತೆ ತನಿಖೆ ಆರಂಭಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LSRN1q7jVDz3PsMb1GzrwE
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಡಿಕ್ಕಿ: ಮಹಿಳೆಯ ದಾರುಣ ಸಾವು
ಜೀವನ ಸಾಗಿಸಲು ಬೀದಿ ಬದಿ ಸಾಬೂನು ಮಾರಾಟ ಮಾಡುತ್ತಿರುವ ಖ್ಯಾತ ನಟಿ
ಹೇಳಿಕೆಗೆ ಸ್ಪಷ್ಟನೆ ನೀಡುತ್ತ, ಗುಂಪು ಹತ್ಯೆ ಸಮರ್ಥಕರಿಗೆ ತಿರುಗೇಟು ನೀಡಿದ ಸಾಯಿ ಪಲ್ಲವಿ
ನಾಗರಿಕ ವಿಚಾರಣೆ ವೇದಿಕೆ ಮತ್ತು ಸಂಪೂರ್ಣ ಭ್ರಷ್ಟಾಚಾರ ನಿರ್ಮೂಲನೆ: ಪದಾಧಿಕಾರಿಗಳ ನೇಮಕ
ಪಿಯುಸಿ ಫಲಿತಾಂಶ: ದಕ್ಷಿಣ ಕನ್ನಡ ಮೇಲುಗೈ, ಚಿತ್ರದುರ್ಗಕ್ಕೆ ಕೊನೆಯ ಸ್ಥಾನ