ಮಂಗಳೂರಿನಲ್ಲಿ ಆ್ಯಂಟಿ ಕಮ್ಯೂನಲ್ ವಿಂಗ್ ಕಾರ್ಯಾರಂಭ!
ಮಂಗಳೂರು: ನೂತನ ಗೃಹಸಚಿವ ಡಾ.ಜಿ.ಪರಮೇಶ್ವರ್ ಅವರ ಸೂಚನೆಯನ್ವಯ ಮಂಗಳೂರಿನಲ್ಲಿ ಆ್ಯಂಟಿ ಕಮ್ಯೂನಲ್ ವಿಂಗ್ ಎರಡು ದಿನಗಳಿಂದ ಕಾರ್ಯಾರಂಭಗೊಂಡಿದೆ.
ಈ ಬಗ್ಗೆ ಮಾತನಾಡಿದ ಮಂಗಳೂರು ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಜೈನ್, ಗೃಹ ಸಚಿವರಾಗಿ ಮಂಗಳೂರಿಗೆ ಪ್ರಥಮ ಭೇಟಿಯ ಸಂದರ್ಭ ಡಾ.ಜಿ.ಪರಮೇಶ್ ಅವರು ಆ್ಯಂಟಿ ಕಮ್ಯೂನಲ್ ವಿಂಗ್ ಮಾಡಲಾಗುತ್ತದೆ ಎಂದು ಘೋಷಿಸಿದ್ದರು. ಅವರ ಸೂಚನೆಯಂತೆ ನಗರದಲ್ಲಿ ಆ್ಯಂಟಿ ಕಮ್ಯೂನಲ್ ವಿಂಗ್ ಕಳೆದರೆಡು ದಿನದ ಹಿಂದಿನಿಂದ ಕಾರ್ಯಾರಂಭಗೊಂಡಿದೆ.
ಸಿಟಿ ಸ್ಪೆಷಲ್ ಬ್ರಾಂಚ್ (ಸಿ ಎಸ್ ಬಿ) ಇನ್ ಸ್ಪೆಕ್ಟರ್ ಶರೀಫ್ ನೇತೃತ್ವದಲ್ಲಿ ಈ ತಂಡ ರಚಿಸಲಾಗಿದೆ. ಸಿ ಎಸ್ ಬಿ ಇನ್ ಸ್ಪೆಕ್ಟರ್, ಸಿಸಿಬಿ ಎಸಿಪಿ ಪಿ.ಎ.ಹೆಗ್ಡೆ ಹಾಗೂ ಐದು ಮಂದಿಯ ತಂಡ ಇದರ ಮೇಲುಸ್ತುವಾರಿ ನೋಡಿಕೊಳ್ಳಲಿದೆ. ಈ ಬಗ್ಗೆ ಏನೇ ವಿಚಾರಗಳಿದ್ದರೂ ನೇರವಾಗಿ ಪೊಲೀಸ್ ಕಮೀಷನರ್ ಗೆ ತಂಡ ವರದಿ ಸಲ್ಲಿಸಲಿದೆ ಎಂದರು.
ಆ್ಯಂಟಿ ಕಮ್ಯೂನಲ್ ವಿಂಗ್ ಎಲ್ಲಾ ಬಗೆಯ ಕೋಮು ಪ್ರಕರಣಗಳು ಹಾಗೂ ಆರೋಪಿಗಳ ಬಗ್ಗೆ ನಿಗಾವಹಿಸಲಿದೆ. ಅಲ್ಲದೆ ಈ ಪ್ರಕರಣಗಳ ಆರೋಪಿಗಳ ಕಾರ್ಯಾಚರಣೆಯ ಬಗ್ಗೆಯೂ ನಿಗಾವಹಿಸಲಿದೆ. ಕಳೆದ 10 ವರ್ಷಗಳಿಂದ ಮಂಗಳೂರು ನಗರದಲ್ಲಿ ನಡೆದ ಸುಮಾರು 200 ಪ್ರಕರಣಗಳ ಬಗ್ಗೆ ಈಗಾಗಲೇ ಗಮನಹರಿಸಲಾಗಿದೆ. ಹಿಂದಿನ ಎಲ್ಲಾ ಪ್ರಕರಣಗಳ ಸಂಬಂಧ ನ್ಯಾಯಾಲಯದ ವಿಚಾರಣೆಗಳ ಬಗ್ಗೆ ನಿಗಾವಹಿಸಲಿದ್ದು, ಸಂತ್ರಸ್ತರಿಗೆ ಸಮಸ್ಯೆಯಾಗದಂತೆ ನೋಡಿಕೊಳ್ಳಲಿದೆ ಎಂದರು.
ಕೋಮುದ್ವೇಷ ಮೂಡಿಸುವಂತ ದ್ವೇಷ ಭಾಷಣ, ನೈತಿಕ ಪೊಲೀಸ್ ಗಿರಿ, ಸಾಮಾಜಿಕ ಜಾಲತಾಣದಲ್ಲಿ ದ್ವೇಷ ಹರಡುವುದು, ದನಗಳವು, ಕೋಮುದ್ವೇಷ ಭಾವನೆಯ ಕೊಲೆ ಪ್ರಕರಣಗಳ ಬಗ್ಗೆ ಈ ತಂಡ ನಿಗಾವಹಿಸಲಿದೆ. ಯಾವುದೇ ಘಟನೆ ನಡೆದಾಗ ಆಯಾ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿ ಆ ಬಳಿಕ ಆ್ಯಂಟಿ ಕಮ್ಯೂನಲ್ ವಿಂಗ್ ಕ್ರಮ ಕೈಗೊಳ್ಳಲಿದೆ ಎಂದು ಕುಲದೀಪ್ ಕುಮಾರ್ ಆರ್.ಜೈನ್ ತಿಳಿಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw