ಶಿಕಾರಿಪುರ: ಹಿಂಸಾಚಾರಕ್ಕೆ ತಿರುಗಿದ ಒಳ ಮೀಸಲಾತಿ ವಿರೋಧಿ ಪ್ರತಿಭಟನೆ: ಬಿಎಸ್ ವೈ ಮನೆಗೆ ಕಲ್ಲು ತೂರಾಟ

shikarepura
27/03/2023

ಪರಿಶಿಷ್ಟ ಸಮುದಾಯಗಳಲ್ಲಿ ಒಳ ಮೀಸಲಾತಿ ನೀಡಿಕೆಗೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಸದಾಶಿವ ವರದಿಯನ್ನು ರಾಜ್ಯ ಸರ್ಕಾರವು ಕೇಂದ್ರಕ್ಕೆ ಶಿಫಾರಸು ಮಾಡುವ ನಿರ್ಧಾರವನ್ನು ವಿರೋಧಿಸಿ ಶಿಕಾರಿಪುರದಲ್ಲಿ ಸೋಮವಾರ ಬಂಜಾರ ಸಮಾಜದವರು ನಡೆಸಿದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ.

ಪ್ರತಿಭಟನಾಕಾರರು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು ಈ ವೇಳೆ ಪೊಲೀಸರು ಅವರನ್ನು ತಡೆದಿದ್ದಾರೆ. ಆದರೆ ಕೆಲವು ಕಿಡಿಗೇಡಿಗಳು ಯಡಿಯೂರಪ್ಪನವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಕಲ್ಲು ತೂರಾಟದಿಂದ ಮನೆಯ ಕಿಟಕಿ ಗಾಜಿಗೆ ಹಾನಿಯಾಗಿದೆ. ತಡಯಲು ಬಂದ ಪೊಲೀಸರ ಮೇಲೂ ಕಲ್ಲು ತೂರಾಟ ಮಾಡಲಾಗಿದೆ. ಯಡಿಯೂರಪ್ಪ ನಿವಾಸದ ಮುಂದೆ ಹಾಕಲಾಗಿದ್ದ ಬ್ಯಾನರ್ಗಳನ್ನು ಸಹ ಹರಿದು ಹಾಕಲಾಗಿದೆ. ನಿವಾಸದ ಮೇಲೆ ಚಪ್ಪಲಿ ಎಸೆದು ಆಕ್ರೋಶ ಹೊರಹಾಕಿದ್ದಾರೆ.

ರಾಜ್ಯ ಸರ್ಕಾರ ಹೊರಡಿಸಿರುವ ಮೀಸಲಾತಿ ಪ್ರಮಾಣದ ವಿರುದ್ಧ ಬಂಜಾರ ಸಮುದಾಯದ ಯುವಕರು ನಗರದ ಅಂಬೇಡ್ಕರ್ ಸರ್ಕಲ್‌ನಿಂದ ತಾಲೂಕು ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ಮಿನಿ ವಿಧಾನಸೌಧ, ಬಸ್ ನಿಲ್ದಾಣದ ಬಳಿ ಸರಕಾರ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆ ಕೂಗಿದರು.

ಈ ವೇಳೆ ಪಟ್ಟಣದಲ್ಲಿ ಹಾಕಲಾಗಿದ್ದ ಬಿಜೆಪಿ, ಪ್ರಧಾನಿ ಮೋದಿ, ಮುಖ್ಯಮಂತ್ರಿ ಬೊಮ್ಮಾಯಿ ಸೇರಿದಂತೆ ಬಿಜೆಪಿ ನಾಯಕರ ಬ್ಯಾನರ್, ಫ್ಲೆಕ್ಸ್‌ಗಳನ್ನು ಕಿತ್ತೊಗೆದಿದ್ದಾರೆ. ಟೈರ್, ಸೀರೆಗಳಿಗೆ ಬೆಂಕಿ ಹಚ್ಚಿಲಾಯಿತು, ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು. ಘಟನೆಯಲ್ಲಿ ಪ್ರತಿಭಟನಾಕಾರರು ಮತ್ತು ಕೆಲವು ಪೊಲೀಸರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಸದ್ಯ ಶಿಕಾರಿಪುರದಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ ಎಂದು ತಿಳಿದುಬಂದಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

 

ಇತ್ತೀಚಿನ ಸುದ್ದಿ

Exit mobile version