ಸಂಸತ್ ಅಧಿವೇಶನಕ್ಕೂ ಮುನ್ನ ವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿ ದೆಹಲಿಗೆ ಪ್ರತಿಭಟನಾ ಮೆರವಣಿಗೆ
ವಕ್ಫ್ ತಿದ್ದುಪಡಿ ಮಸೂದೆಯನ್ನು ವಿರೋಧಿಸಿ ಮುಂಬರುವ ಸಂಸತ್ ಅಧಿವೇಶನಕ್ಕೆ ಮುಂಚಿತವಾಗಿ ನವೆಂಬರ್ 24 ರಂದು ದೆಹಲಿಗೆ ಮೆರವಣಿಗೆ ನಡೆಸುವುದಾಗಿ ಜೈಪುರದ ಮುಸ್ಲಿಂ ವಿದ್ವಾಂಸರು ಮತ್ತು ಸಮುದಾಯದ ಮುಖಂಡರು ಘೋಷಿಸಿದ್ದಾರೆ. ಈ ಮಸೂದೆಯು ಮುಸ್ಲಿಂ ಸಮುದಾಯಕ್ಕೆ ಸೇರಿದ ಆಸ್ತಿಗಳನ್ನು ವಶಪಡಿಸಿಕೊಳ್ಳುವ ಪ್ರಯತ್ನವಾಗಿದೆ ಎಂದು ಅವರು ಆರೋಪಿಸಿದ್ದಾರೆ.
ಜೈಪುರದಲ್ಲಿ ನಡೆದ ಪ್ರತಿಭಟನಾ ಕಾರ್ಯಕ್ರಮದಲ್ಲಿ ವಕ್ಫ್ ಮಂಡಳಿ ಸದಸ್ಯರು, ಅಜ್ಮೀರ್ ದರ್ಗಾದ ಪ್ರತಿನಿಧಿಗಳು, ಕಾಂಗ್ರೆಸ್ ಶಾಸಕ ಮತ್ತು ವಕ್ಫ್ ಮಸೂದೆಯ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ಸದಸ್ಯ ಇಮ್ರಾನ್ ಮಸೂದ್ ಸೇರಿದಂತೆ ಇತರರು ಭಾಗವಹಿಸಿದ್ದರು.
ಮಸೀದಿಗಳು ಮತ್ತು ಮುಸ್ಲಿಂ ದತ್ತಿಗಳಿಗೆ ಸಂಬಂಧಿಸಿದ ಆಸ್ತಿಗಳ ನಿರ್ವಹಣೆಯನ್ನು ಸುಧಾರಿಸುವ ಕೇಂದ್ರದ ಮಹತ್ವದ ಕ್ರಮವಾದ ವಕ್ಫ್ (ತಿದ್ದುಪಡಿ) ಮಸೂದೆಯನ್ನು ಆಗಸ್ಟ್ ನಲ್ಲಿ ಲೋಕಸಭೆಯಲ್ಲಿ ಪರಿಚಯಿಸಲಾಗಿತ್ತು. ಸದ್ಯ ಜೆಪಿಸಿಯ ಚರ್ಚೆಯಲ್ಲಿದೆ. ವಕ್ಫ್ ಆಸ್ತಿಗಳ ನಿರ್ವಹಣೆಯಲ್ಲಿ ಹೆಚ್ಚಿನ ಪಾರದರ್ಶಕತೆ ತರಲು ಈ ಮಸೂದೆಯನ್ನು ತರುತ್ತಿದ್ದೇವೆ ಎಂದು ಸರ್ಕಾರ ಬಣ್ಣಿಸಿದರೆ, ಮುಸ್ಲಿಂ ಸಂಘಟನೆಗಳು ಮತ್ತು ವಿರೋಧ ಪಕ್ಷಗಳು ಇದು ಸರ್ಕಾರಕ್ಕೆ ವ್ಯಾಪಕ ಅಧಿಕಾರವನ್ನು ನೀಡುತ್ತದೆ ಮತ್ತು ಸಮುದಾಯ ಒಡೆತನದ ಆಸ್ತಿಗಳಿಗೆ ಬೆದರಿಕೆಯನ್ನುಂಟು ಮಾಡುತ್ತದೆ ಎಂದು ವಾದಿಸಿವೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj