ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಯುವತಿ: ಸಿಗರೇಟ್ ನಿಂದ ಸುಟ್ಟ ಗಾಯ ಪತ್ತೆ
ಬೆಳಗಾವಿ: ಯುವತಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದ್ದು, ಯುವತಿಯ ದೇಹದ ಮೇಲೆ ಸಿಗರೇಟ್ ನಿಂದ ಸುಟ್ಟ ಗಾಯಗಳು ಪತ್ತೆಯಾಗಿವೆ ಎಂದು ತಿಳಿದು ಬಂದಿದೆ.
ಬೈಲಹೊಂಗಲ ಪಟ್ಟಣದ ನಿವಾಸಿ ತಬಸ್ಸುಮ್ ಸವದತ್ತಿ(19) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಈಕೆ ಬೆಂಗಳೂರಿನ ಕಾಲ್ ಸೆಂಟರ್ ವೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದರು ಎನ್ನಲಾಗಿದೆ.
ನಿನ್ನೆ ಬೆಳಗಾವಿ ಜಿಲ್ಲಾಸ್ಪತ್ರೆಗೆ ಅಪರಿಚಿತ ಯುವಕ ದಾಖಲಿಸಿದ್ದ. ಈ ಬಗ್ಗೆ ದೂರು ನೀಡಿ ಎಂದಿದ್ದಕ್ಕೆ ಯುವತಿಯ ಮೊಬೈಲ್ನೊಂದಿಗೆ ಯುವಕ ಪರಾರಿಯಾಗಿದ್ದಾನೆ.
ಪೋಷಕರು ಆಸ್ಪತ್ರೆಗೆ ಬಂದಾಗ ತಬಸ್ಸುಮ್ ನಿತ್ರಾಣ ಸ್ಥಿತಿಯಲ್ಲಿದ್ದಳು. ಯುವತಿಯ ತಲೆಯ ಹಿಂಬದಿಯಲ್ಲಿ, ಮೈಮೇಲೆ ಸಿಗರೇಟ್‌ನಿಂದ ಸುಟ್ಟಿದ ಗಾಯದ ಗುರುತು ಪತ್ತೆಯಾಗಿವೆ.
ಹೆಚ್ಚಿನ ಚಿಕಿತ್ಸೆಗೆ ಯುವತಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಇಂದು ಬೆಳಗ್ಗೆ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ತಬಸ್ಸುಮ್ ಸಾವನ್ನಪ್ಪಿದ್ದಾಳೆ.
ಇನ್ನೂ ಮಗಳನ್ನು ಹತ್ಯೆ ಮಾಡಲಾಗಿದೆ ಎಂದು ತಬಸ್ಸುಮ್ ತಂದೆ ಇರ್ಷಾದ್ ಅಹ್ಮದ್ ಸವದತ್ತಿ ಆರೋಪಿಸಿದ್ದು, ಬೆಳಗಾವಿ ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka