ಅನುಮತಿಯಿಲ್ಲದೆ ಧಾರ್ಮಿಕ ಮೆರವಣಿಗೆಗಳನ್ನು ನಡೆಸಲು ಅವಕಾಶವಿಲ್ಲ :ಯೋಗಿ ಆದಿತ್ಯನಾಥ್
ಉತ್ತರ ಪ್ರದೇಶ; ಸಾಂಪ್ರದಾಯಿಕ ಧಾರ್ಮಿಕ ಮೆರವಣಿಗೆಗಳಿಗೆ ಮಾತ್ರ ಅವಕಾಶ ನೀಡಲಾಗುವುದು ಮತ್ತು ಅನುಮತಿಯಿಲ್ಲದೆ ಧಾರ್ಮಿಕ ಮೆರವಣಿಗೆಗಳಿಗೆ ಅವಕಾಶ ನೀಡುವುದಿಲ್ಲ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
ಹನುಮ ಜಯಂತಿಯ ಶೋಭಾಯಾತ್ರೆ ವೇಳೆ ದೆಹಲಿಯ ಜಹಾಂಗೀರಪುರಿಯಲ್ಲಿ ಎರಡು ಗುಂಪುಗಳ ನಡುವಿನ ಘರ್ಷಣೆ ಮತ್ತು ವಾಹನಗಳಿಗೆ ಬೆಂಕಿ ಹಚ್ಚಿದ ಹಿನ್ನೆಲೆಯಲ್ಲಿ ಸರ್ಕಾರದ ಆದೇಶ ಹೊರಡಿಸಿದೆ.ಮೈಕ್ರೊಫೋನ್ ಗಳು ಮತ್ತು ಧ್ವನಿವರ್ಧಕಗಳನ್ನು ಬಳಸಬಹುದು, ಆದರೆ ಅವುಗಳ ಧ್ವನಿ ಇತರರಿಗೆ ತೊಂದರೆಯಾಗದಂತೆ ಎಚ್ಚರ ವಹಿಸಬೇಕು.
ಉತ್ತರ ಪ್ರದೇಶದಲ್ಲಿ ಪ್ರತಿಯೊಬ್ಬರೂ ತಮ್ಮ ಧರ್ಮದ ಹಬ್ಬವನ್ನು ಆಚರಿಸಲು ಸ್ವತಂತ್ರರು ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಿಳಿಸಿದ್ದಾರೆ. ಧಾರ್ಮಿಕ ಸಮಾರಂಭಗಳಿಗೆ ಸಂಬಂಧಿಸಿದಂತೆ ದೆಹಲಿ, ಮಧ್ಯಪ್ರದೇಶ, ಗುಜರಾತ್ ಮತ್ತು ಕರ್ನಾಟಕದಲ್ಲಿ ಘರ್ಷಣೆಗಳು ನಡೆದಿವೆ. ಮಹಾರಾಷ್ಟ್ರ ಮತ್ತು ಕರ್ನಾಟಕದಲ್ಲಿ ಧ್ವನಿವರ್ಧಕಗಳ ವಿವಾದ ಸೃಷ್ಟಿಯಾದ ಹಿನ್ನೆಲೆಯಲ್ಲಿ ಯುಪಿ ಸರ್ಕಾರ ಧ್ವನಿವರ್ಧಕಗಳ ಮೇಲೆ ನಿಯಂತ್ರಣ ಬಿಗಿಗೊಳಿಸಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ https://chat.whatsapp.com/FZkISFWKknBDvdYkMVFArW
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಅಶ್ಲೀಲ ಚಿತ್ರದಲ್ಲಿರುವುದು ಪತ್ನಿ ಎಂದು ಶಂಕಿಸಿ ಪತ್ನಿಯ ಬರ್ಬರ ಹತ್ಯೆ!
ಕಾರು -ಬೈಕ್ ನಡುವೆ ಮುಖಾಮುಖಿ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು
ಅಪ್ರಾಪ್ತ ದಲಿತ ಬಾಲಕನಿಂದ ಕಾಲು ನೆಕ್ಕಿಸಿದ ಠಾಕೂರರು!: ವಿಡಿಯೋ ವೈರಲ್
ಶಾಲೆಯಲ್ಲಿ ಸರಣಿ ಬಾಂಬ್ ಸ್ಫೋಟ: ಮಕ್ಕಳ ಸಹಿತ 6 ಮಂದಿಯ ದಾರುಣ ಸಾವು
ಕೋವಿಡ್ ಅನಿರೀಕ್ಷಿತ ಏರಿಕೆ: ದೆಹಲಿ ಕ್ಯಾಪಿಟಲ್ಸ್ ಮತ್ತು ಪಂಜಾಬ್ ಕಿಂಗ್ಸ್ ಪಂದ್ಯ ಮುಂಬೈಗೆ ಸ್ಥಳಾಂತರ
ಮತ್ತೆ ಕ್ಷಿಪಣಿ ದಾಳಿ ಆರಂಭಿಸಿದ ರಷ್ಯಾ: 17 ಉಕ್ರೇನ್ ನಾಗರಿಕರ ಹತ್ಯೆ