ಮಂಗಳೂರು ನಗರದ ನೂತನ ಪೊಲೀಸ್ ಆಯುಕ್ತರಾಗಿ ಅನುಪಮ್ ಅಗರ್ವಾಲ್ ನೇಮಕ

anupam agarwal
05/09/2023

ಮಂಗಳೂರು ನಗರದ ನೂತನ ಪೊಲೀಸ್ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಅನುಪಮ್ ಅಗರ್ವಾಲ್ ನೇಮಕಗೊಂಡಿದ್ದಾರೆ.

ರಾಜ್ಯ ಸರ್ಕಾರವೂ ಹಾಲಿ ಮಂಗಳೂರು ಪೊಲೀಸ್ ಕಮೀಷನರ್ ಆಗಿರುವ ಕುಲದೀಪ್ ಕುಮಾರ್ ಆರ್ ಜೈನ್ ಅವರು ಸೇರಿದಂತೆ 35 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಕುಲದೀಪ್ ಅವರಿಗೆ ಇನ್ನು ಹುದ್ದೆ ತೋರಿಸದೇ ವರ್ಗಾವಣೆ ಮಾಡಿದೆ. ಕುಲದೀಪ್ ಅವರು ಖಡಕ್ ಆಫೀಸರ್ ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿ ಎಂದು ಹೆಸರುವಾಸಿಯಾಗಿದ್ದರು.

ಇನ್ನು ನೂತನ ಆಯುಕ್ತರಾಗಿರುವ ಅನುಪಮ್ ಅಗರ್ವಾಲ್ 2008-ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿದ್ದು ಮೂಲತಃ ರಾಜಸ್ಥಾನದ ಜೋಧ್‌ಪುರದವರು. ಈ ಹಿಂದೆ ಕರ್ನಾಟಕ ಪೊಲೀಸ್ ಅಕಾಡೆಮಿಯ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ದಾವಣಗೆರೆಯಲ್ಲಿ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿಯಾಗಿ, ಬೆಳಗಾವಿಯಲ್ಲಿ ಉಪ ಪೊಲೀಸ್ ಆಯುಕ್ತರಾಗಿ, ರಾಮನಗರ ಮತ್ತು ವಿಜಯಪುರದಲ್ಲಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದಾರೆ.

ಇತ್ತೀಚಿನ ಸುದ್ದಿ

Exit mobile version