ಅನುಶ್ರೀ ವಿರುದ್ಧ ಮತ್ತೆ ವಿಚಾರಣೆ ನಡೆಯುವ ಸಾಧ್ಯತೆ ಕಡಿಮೆ | ಮಂಗಳೂರು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್
ಮಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾರ್ಜ್ ಶೀಟ್ ಸಲ್ಲಿಕೆಯಾಗಿದ್ದು, ಈ ಚಾರ್ಜ್ ಶೀಟ್ ನಲ್ಲಿ ಆ್ಯಂಕರ್ ಅನುಶ್ರೀ ಹೆಸರು ಕೂಡ ಉಲ್ಲೇಖವಾಗಿದೆ. ಆದರೆ, ಅನುಶ್ರೀ ವಿರುದ್ಧ ಪ್ರಕರಣ ದಾಖಲಾಗಿಲ್ಲ. ಈ ಸಂಬಂಧ ಮಾಧ್ಯಮಗಳಿಗೆ ಮಂಗಳೂರು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಪ್ರತಿಕ್ರಿಯಿಸಿದ್ದಾರೆ.
ಡ್ರಗ್ಸ್ ಪ್ರಕರಣ ಸಂಬಂಧ ಈಗಾಗಲೇ ತನಿಖೆ ಪೂರ್ಣಗೊಂಡು ಅಂತಿಮ ವರದಿ ಸಲ್ಲಿಕೆಯಾಗಿದೆ. ನಾನು ಆಯುಕ್ತನಾಗಿ ಬರುವ ಮೊದಲೇ ತನಿಖೆ ಪೂರ್ಣಗೊಂಡಿತ್ತು. ಈ ಬಗ್ಗೆ ನಾನು ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದೇನೆ. ನ್ಯಾಯಾಲಯಕ್ಕೆ ಅಂತಿಮ ಚಾರ್ಜ್ ಶೀಟ್ ಸಲ್ಲಿಸಲಾಗಿದೆ. ಆಂಕರ್ ಅನುಶ್ರೀ ವಿರುದ್ಧ ಸಾಕ್ಷಾಧಾರದ ಕೊರತೆಯಿಂದಾಗಿ ಪ್ರಕರಣ ದಾಖಲಾಗಿಲ್ಲ ಎಂದು ಮಾಹಿತಿ ನೀಡಿದ್ದಾರೆ.
ಇನ್ನೂ ಅನುಶ್ರೀ ಅವರನ್ನು ಮತ್ತೆ ವಿಚಾರಣೆ ನಡೆಸುವ ಸಾಧ್ಯತೆಗಳು ಕಡಿಮೆ ಇದೆ. ಯಾಕೆಂದರೆ ಅವರ ವಿರುದ್ಧದ ಸಾಕ್ಷ್ಯಾಧಾರಗಳು ಇಲ್ಲವಾಗಿರುವುದರಿಂದ ಚಾರ್ಜ್ ಶೀಟ್ ಸಲ್ಲಿಸಲಾಗಿಲ್ಲ ಎಂದು ಅವರು ಹೇಳಿದ್ದಾರೆ.
ಚಾರ್ಜ್ ಶೀಟ್ ನಲ್ಲಿರುವ ಹೇಳಿಕೆ ನನ್ನದಲ್ಲ ಎಂಬ ಕಿಶೋರ್ ಶೆಟ್ಟಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಅವರು, ಚಾರ್ಜ್ ಶೀಟ್ ನಲ್ಲಿನ ಅಂಶಗಳನ್ನು ಓದಿ ಹೇಳಿ ನಂತರ ವ್ಯಕ್ತಿ ಸಹಿ ಪಡೆಯಲಾಗುತ್ತದೆ. ಹೇಳಿಕೆ ಅವರದ್ದಲ್ಲ ಎನ್ನುವುದಾದರೆ ಕಿಶೋರ್ ಅಂದು ನ್ಯಾಯಾಲಯದಲ್ಲೇ ಹೇಳಬಹುದಿತ್ತು. ಈಗ ಹೇಳಿಕೆ ನನ್ನದಲ್ಲ ಎಂಬುದು ತಪ್ಪು ಎಂದು ಅವರು ಹೇಳಿದ್ದಾರೆ.
ಇನ್ನಷ್ಟು ಸುದ್ದಿಗಳು…
ಹೆದ್ದಾರಿಯ ಉದ್ದಕ್ಕೂ ಕಿಲೋ ಮೀಟರ್ ಗಟ್ಟಲೆ ಕಾಂಡಮ್ ಪತ್ತೆ | ಅಷ್ಟಕ್ಕೂ ನಡೆದದ್ದೇನು?
ಜಾತ್ಯತೀತ ಹೆಸರಿನಲ್ಲಿ ಮುಸ್ಲಿಮರನ್ನು ವಂಚಿಸಲಾಗುತ್ತಿದೆ | ಅಸಾದುದ್ದೀನ್ ಓವೈಸಿ ಆಕ್ರೋಶ
ರವಿಶಂಕರ್ ಗುರೂಜಿ ಆಶ್ರಮದವರಿಗೇ ಮಂಕುಬೂದಿ ಎರಚಿ ವಂಚಿಸಿದ ನಕಲಿ ಐಎಎಸ್ ಅಧಿಕಾರಿ!
ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದ ಲಾರಿ | ಕಾರಿನಲ್ಲಿದ್ದ ಇಬ್ಬರ ದುರಂತ ಸಾವು
12 ವರ್ಷದ ಬಾಲಕಿಯ ಮೇಲೆ ಮಲತಂದೆ, ನೆರೆ ಮನೆಯ ವ್ಯಕ್ತಿಯಿಂದ ಅತ್ಯಾಚಾರ!
ನಿಶ್ಚಿತಾರ್ಥವಾದ ಬೆನ್ನಲ್ಲೇ ಗಂಡಿಗೆ ಶಾಕ್ ನೀಡಿದ ಯುವತಿ | ಚಿನ್ನಾಭರಣದೊಂದಿಗೆ ಪರಾರಿ, ತಾಯಿಗೂ ಟೋಪಿ ಹಾಕಿದ ಮಗಳು!
ಪ್ರೀತಿಸಿ ವಿವಾಹವಾಗಿದ್ದವರನ್ನು ಜಾತಿಗಾಗಿ ಬೇರ್ಪಡಿಸಿದರು! | ಫೇಸ್ ಬುಕ್ ಲೈವ್ ಗೆ ಬಂದು ಯುವಕ ಆತ್ಮಹತ್ಯೆ