ಅಂಗನವಾಡಿಯಲ್ಲಿ ಅಡುಗೆ ಮಾಡಿ ಮರಳುತ್ತಿದ್ದ ಮಹಿಳೆಯರು ಸೇರಿದಂತೆ 13 ಮಂದಿ ಅಪಘಾತಕ್ಕೆ ಬಲಿ
23/03/2021
ಗ್ವಾಲಿಯರ್: ಆಟೋವೊಂದಕ್ಕೆ ರಿಕ್ಷಾ ಡಿಕ್ಕಿಯಾದ ಪರಿಣಾಮ 13 ಜನರು ದಾರುಣವಾಗಿ ಸಾವನ್ನಪ್ಪಿದ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ನಡೆದಿದ್ದು, ಅಪಘಾತದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಉಳಿದವರು ಆಸ್ಪತ್ರೆಗೆ ದಾಖಲಿಸಿದ ಬಳಿಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಇಂದು ಬೆಳಗ್ಗೆ 7 ಗಂಟೆಯ ಸುಮಾರಿಗೆ ಈ ಘಟನೆ ನಡೆದಿದೆ. ಅಂಗನವಾಡಿ ಕೇಂದ್ರದಲ್ಲಿ ಅಡುಗೆ ಮಾಡಿಟ್ಟು ತಮ್ಮ ಮನೆಗೆ ಹಿಂದಿರುಗುತ್ತಿದ್ದ 12 ಮಂದಿ ಮಹಿಳೆಯರನ್ನು ಆಟೋ ಚಾಲಕ ಅವರ ಮನೆಗೆ ಬಿಡಲು ತೆರಳುತ್ತಿದ್ದ. ಈ ವೇಳೆ ವೇಗವಾಗಿ ಬಂದ ಬಸ್, ಆಟೋ ರಿಕ್ಷಾಕ್ಕೆ ಅಪ್ಪಳಿಸಿದೆ.
ಮಧ್ಯಪ್ರದೇಶದ ಗ್ವಾಲಿಯರ್ ನ ಹಳೆಯ ಪುರಾಣಿ ಚವಾನಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಬೆಳ್ಳಂಬೆಳಗ್ಗೆ ನಡೆದ ಈ ಘಟನೆ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ.