ಸಿದ್ದರಾಮೋತ್ಸವ ಸಂದರ್ಭ ಅಪಘಾತದಲ್ಲಿ ಮೃತಪಟ್ಟ ಅಭಿಮಾನಿ ಮನೆಗೆ ಸಿದ್ದರಾಮಯ್ಯ ಭೇಟಿ
ಬಾಗಲಕೋಟೆ: ದಾವಣಗೆರೆಯಲ್ಲಿ ನಡೆದ ಸಿದ್ದರಾಮೋತ್ಸವ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಅಭಿಮಾನಿಗಳು ಕಾರು ಅಪಘಾತಗೊಂಡು ಓರ್ವ ಮೃತಪಟ್ಟು ಹಲವರು ಗಾಯಗೊಂಡಿದ್ದರು. ಇದೀಗ ಮೃತರ ಹಾಗೂ ಗಾಯಾಳುಗಳ ಕುಟುಂಬಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯನವರು ವೈಯಕ್ತಿಕ ಪರಿಹಾರ ನೀಡಿದ್ದಾರೆ.
ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿದ ಸಿದ್ದರಾಮಯ್ಯ, ಗಂಭೀರ ಸ್ಥಿತಿಯಲ್ಲಿರುವ ಇಬ್ಬರ ಕುಟುಂಬಕ್ಕೆ ತಲಾ 1 ಲಕ್ಷ ರೂಪಾಯಿ ನೆರವು ನೀಡಿದರು. ಸಾಮಾನ್ಯ ಗಾಯಗೊಂಡಿರುವವರಿಗೆ ತಲಾ 50 ಸಾವಿರ ರೂಪಾಯಿ ನೆರವು ನೀಡಿದರು.
ಬೀಳಗಿ ತಾಲೂಕಿ ಚಿಕ್ಕ ಆಲಗುಂಡಿ ಗ್ರಾಮಕ್ಕೆ ಭೇಟಿ ನೀಡಿದ ಸಿದ್ದರಾಮಯ್ಯ, ಅಪಘಾತದಲ್ಲಿ ಮೃತಪಟ್ಟಿದ್ದ ಪ್ರಕಾಶ್ ಮನೆಗೆ ತೆರಳಿ ಕುಟುಂಬಕ್ಕೆ ಸಾಂತ್ವನ ಹೇಳಿದರು. ಬಳಿಕ 2 ಲಕ್ಷ ರೂಪಾಯಿ ನೆರವು ನೀಡಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka