ಯುವಕನ ಅಪಹರಣ, ಪೊಲೀಸರ ಮೇಲೆ ಹಲ್ಲೆ ಪ್ರಕರಣ: ಐವರು ಆರೋಪಿಗಳು ಅರೆಸ್ಟ್
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಣಕ್ಕಾಗಿ ಯುವಕನೊಬ್ಬನ ಅಪಹರಣ ಮತ್ತು ಪೊಲೀಸರ ಮೇಲೆ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣಕ್ಕೆ ಸಂಬಂಧಿಸಿ ಐವರು ಆರೋಪಿಗಳನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಅಬೂಬಕರ್ ಸಿದ್ದೀಕ್ ಯಾನೆ ಕರ್ವೆಲ್ ಸಿದ್ದಿಕ್ (39), ಕಲಂದರ ಶಾಫಿ ಗಡಿಯಾರ(22), ದೇರಳಕಟ್ಟೆಯ ಇರ್ಫಾನ್(38), ಪಾಂಡೇಶ್ವರದ ಮುಹಮ್ಮದ್ ರಿಯಾಝ್(33) ಮತ್ತು ಬೆಳ್ತಂಗಡಿಯ ಮುಹಮ್ಮದ್ ಇರ್ಷಾದ್(28) ಎಂದು ಗುರುತಿಸಲಾಗಿದೆ.
ಆರೋಪಿಗಳು ಗೃಹಬಂಧನದಲ್ಲಿರಿಸಿದ್ದ ಕಡಬ ತಾಲೂಕಿನ ಕೊಯಿಲ ಗ್ರಾಮದ ಶಾರೂಕ್‌ನ್ನು ಪೊಲೀಸರು ರಕ್ಷಿಸಿದ್ದಾರೆ. ಶುಕ್ರವಾರ ಬೆಳಗ್ಗಿನ ಜಾವ ಗಸ್ತಿನಲ್ಲಿದ್ದ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯ ಸಿಬ್ಬಂದಿ ಮಲ್ಲಿಕಾರ್ಜುನ ಅಂಗಡಿ ಮತ್ತು ಪ್ರದೀಪ್ ಎಂಬವರು ಅರ್ಕುಳ ಗ್ರಾಮದ ತುಪ್ಪೆಕಲ್ಲು ಎಂಬಲ್ಲಿ ಕಾರೊಂದನ್ನು ನಿಲ್ಲಿಸಿ ಅನುಮಾನಾಸ್ಪದವಾಗಿ ನಿಂತಿದ್ದವರನ್ನು ಐವರನ್ನು ಪ್ರಶ್ನಿಸಿದ್ದರು. ಈ ವೇಳೆ ಐವರು ಪೊಲೀಸರತ್ತ ಕಲ್ಲು ತೂರಾಟ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿ ಪರಾರಿಯಾಗಿದ್ದರು.
ಈ ಸಂಬಂಧ ಮಂಗಳೂರು ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಕೊಂಡು ಕಾರ್ಯಾಚರಣೆ ನಡೆಸಿ ಐವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಬೆಂಗಳೂರಿನ ರೌಡಿ ಶೀಟರ್ ಒಬ್ಬನ ಸೂಚನೆಯಂತೆ ಉಪ್ಪಿನಂಗಡಿಯ ಕೊಯಿಲ ನಿವಾಸಿ ಶಾರೂಕ್ ನನ್ನು ಅಪಹರಿಸಿರುವುದು ಬೆಳಕಿಗೆ ಬಂದಿದೆ. ಐವರು ಆರೋಪಿಗಳ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ ಹಲವಾರು ಪ್ರಕರಣಗಳು ದಾಖಲಾಗಿವೆ. ಬೆಂಗಳೂರಿನ ರೌಡಿ ಶೀಟರ್ ಒಬ್ಬನ ನಿರ್ದೇಶನದ ಮೇರೆಗೆ ಶಾರೂಖ್ ನನ್ನು ಕಿಡ್ನಾಪ್ ಮಾಡಲಾಗಿದೆ ಎಂಬ ಮಾಹಿತಿ ಸಿಕ್ಕಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LG00SlXNdBFJ1LFb3E40gL
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw