ಅಸಹಾಯಕ ಸ್ಥಿತಿಯಲ್ಲಿದ್ದ ಅಪರಿಚಿತ ವ್ಯಕ್ತಿಯ ರಕ್ಷಣೆ: ಪುನರ್ವಸತಿ ಒದಗಿಸಿ ಮಾನವೀಯತೆ - Mahanayaka
11:25 PM Thursday 12 - December 2024

ಅಸಹಾಯಕ ಸ್ಥಿತಿಯಲ್ಲಿದ್ದ ಅಪರಿಚಿತ ವ್ಯಕ್ತಿಯ ರಕ್ಷಣೆ: ಪುನರ್ವಸತಿ ಒದಗಿಸಿ ಮಾನವೀಯತೆ

hosa belaku ashrama
06/08/2022

ಉಡುಪಿ: ಅಸಹಾಯಕ ಸ್ಥಿತಿಯಲ್ಲಿ ಕಾರ್ಕಳ ಪ್ರದೇಶದಲ್ಲಿ ನೆಲೆಕಂಡಿದ್ದ ಅಪರಿಚಿತ ವ್ಯಕ್ತಿಯನ್ನು ರಕ್ಷಿಸಿ, ಪುನರ್ವಸತಿ ಒದಗಿಸಿ ಮಾನವೀಯತೆ ತೋರಿರುವ ಘಟನೆ ಶುಕ್ರವಾರ ನಡೆದಿದೆ.

ಅಸಹಾಯಕ ಸ್ಥಿತಿಯಲ್ಲಿದ್ದ ವ್ಯಕ್ತಿ, ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು. ಸ್ಥಳಿಯರು ಆಹಾರ ನೀಡಿ ಉಪಚರಿಸಿದ್ದರು. ಈ ಬಗ್ಗೆ ವಿಷಯ ತಿಳಿದ ಪೋಲಿಸರು, ಉಡುಪಿಯ ಸಮಾಜಸೇವಕ ನಿತ್ಯಾನಂದ ಒಳಕಾಡು ಅವರಿಗೆ ಮಾಹಿತಿ ನೀಡಿದರು. ಬಸ್ಸಿನ ನಿರ್ವಾಹಕನ ನೆರವಿನ ಮೂಲಕ ಉಡುಪಿಗೆ ಕರೆತಂದಿರುವ ವ್ಯಕ್ತಿಯನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು  ಮಣಿಪಾಲದ ಹೊಸಬೆಳಕು ಆಶ್ರಮಕ್ಕೆ ದಾಖಲಿಸಿದರು.

ಆಶ್ರಮ ಸಂಚಾಲಕ ವಿನಯಚಂದ್ರ ಸಾಸ್ತಾನ ಅವರು ನೊಂದ ವ್ಯಕ್ತಿಗೆ ಆಶ್ರಯ ಕಲ್ಪಿಸಿ ನೆರವಾದವರು. ವ್ಯಕ್ತಿಯ ಹೆಸರು ವಿಳಾಸ ತಿಳಿದುಬಂದಿಲ್ಲ. ಉತ್ತರ ಭಾರತದಿಂದ ವಲಸೆ ಬಂದಿರುವ ಕಾರ್ಮಿಕ ಇರಬಹುದೆಂದು ಶಂಕಿಸಲಾಗಿದೆ. ಪರಿಚಿತರು ಇದ್ದಲ್ಲಿ ಹೊಸಬೆಳಕು ಆಶ್ರಮದ ಸಂಚಾಲಕರನ್ನು ಸಂಪರ್ಕಿಸಲು ಸೂಚಿಸಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ