ಮಸಣದ ಹೂವಿನಿಂದ ಮಜಾ ಟಾಕೀಸ್ ವರೆಗಿನ ಅಪರ್ಣಾ ಅವರ ಪಯಣ ಹೀಗಿತ್ತು…! - Mahanayaka

ಮಸಣದ ಹೂವಿನಿಂದ ಮಜಾ ಟಾಕೀಸ್ ವರೆಗಿನ ಅಪರ್ಣಾ ಅವರ ಪಯಣ ಹೀಗಿತ್ತು…!

aparna
12/07/2024

ಅಪರ್ಣಾ ಅವರು ಆಕಾಶವಾಣಿ ಮತ್ತು ಕಿರುತೆರೆಯ ಕಲಾವಿದೆಯಾಗಿದ್ದರು. ಇವರ ಪೂರ್ತಿ ಹೆಸರು ಅಪರ್ಣಾ ವಸ್ತಾರೆ. ಕಣಗಾಲ್ ಪುಟ್ಟಣ್ಣನವರ ‘ಮಸಣದ ಹೂವು’ ಚಿತ್ರದಿಂದ ಬೆಳಕಿಗೆ ಬಂದವರು. ಅಚ್ಚಗನ್ನಡವನ್ನು ಸ್ವಚ್ಛವಾಗಿ ಆಡುವಾಕೆಯೆಂದೇ ಹೆಸರು ಮಾಡಿದ್ದರು. ಇವರ ಅನಿರೀಕ್ಷಿತ ಸಾವು ಅವರ ಅಪಾರ ಅಭಿಮಾನಿಗಳಿಗೆ ಆಘಾತ ತಂದಿದೆ.

ಕನ್ನಡ ದೂರದರ್ಶನದ ಆರಂಭದ ಹಂತದಲ್ಲಿಯೇ ಕಾರ್ಯಕ್ರಮ ನೀಡುತ್ತ ಬಂದಿದ್ದರು. 90 ರ ದಶಕದಲ್ಲಿ ಚಂದನ ವಾಹಿನಿಯಲ್ಲಿ ಮೂಡಿಬಂದ ಹಲವು ಕಾರ್ಯಕ್ರಮಗಳನ್ನು ನಿರೂಪಿಸಿದ್ದಾರೆ. ರೇಡಿಯೋ ಜಾಕಿಯಾಗಿಯೂ ಕೆಲಸ ಮಾಡಿದ್ದಾರೆ. ಒಂದು ಸಾವಿರಕ್ಕೂ ಹೆಚ್ಚು ಟಿವಿ ಶೋಗಳನ್ನು ನಡೆಸಿದ್ದಾರೆ. ಜನಪ್ರಿಯ ಧಾರಾವಾಹಿ ‘ಮುಕ್ತ’ದಲ್ಲಿ ಶೀಲಾ ಪ್ರಸಾದ್ ಪಾತ್ರದಲ್ಲಿ ಕಿರುತೆರೆ ಪ್ರೇಕ್ಷಕರಿಗೆ ಹತ್ತಿರವಾಗಿದ್ದರು. ಅಂಕಣಗಾರ್ತಿಯಾಗಿಯೂ ಜನಪ್ರಿಯರಾಗಿದ್ದರು. ಯುವ ವಾಸ್ತುಶಿಲ್ಪಿ ಹಾಗೂ ಕವಿ ನಾಗರಾಜ ವಸ್ತಾರೆ ಅವರನ್ನು ವಿವಾಹವಾಗಿದ್ದರು.

2013 ರಲ್ಲಿ ಬಿಗ್ ಬಾಸ್ ಕನ್ನಡದ ಮೊದಲ ಸೀಸನ್ ನಲ್ಲಿ ಅಪರ್ಣ ಭಾಗವಹಿಸಿದ್ದರು. ಸೃಜನ್ ಲೋಕೇಶ್ ನೇತೃತ್ವದಲ್ಲಿ ಆರಂಭವಾದ `ಮಜಾ ಟಾಕೀಸ್’ ಕಾರ್ಯಕ್ರಮದಲ್ಲಿ ವರಲಕ್ಷ್ಮಿಯಾಗಿ ಎಲ್ಲರ ಮನಮೆಚ್ಚಿದ ಕಲಾವಿದೆಯಾಗಿದ್ದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ