ಅಪಾಯದ ಮಟ್ಟ ಮೀರಿ ಉಕ್ಕಿ ಹರಿದ ಪಂಬಾ ನದಿ: ಶಬರಿಮಲೆ ಯಾತ್ರೆ ನಿಷೇಧ - Mahanayaka

ಅಪಾಯದ ಮಟ್ಟ ಮೀರಿ ಉಕ್ಕಿ ಹರಿದ ಪಂಬಾ ನದಿ: ಶಬರಿಮಲೆ ಯಾತ್ರೆ ನಿಷೇಧ

pamba river
20/11/2021

ಪತ್ತನಾಂತಿಟ್ಟ: ಕೇರಳದಲ್ಲಿ ಮಳೆಯಬ್ಬರ ಹೆಚ್ಚಾಗಿದ್ದು, ವಿಪರೀತ ಮಳೆಯ ಕಾರಣ, ಪ್ರಮುಖ ನದಿಗಳಲ್ಲಿ ನೀರಿನ ಮಟ್ಟ ಹೆಚ್ಚುತ್ತಿದೆ.  ಪತ್ತನಾಂತಿಟ್ಟದಲ್ಲಿ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವುದರಿಂದಾಗಿ ಪಂಬಾ ನದಿಯಲ್ಲಿ ನೀರು ಉಕ್ಕಿ ಹರಿದಿದೆ.

ಪಂಬಾ ನದಿಯಲ್ಲಿ ನೀರು ಉಕ್ಕಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಅಯ್ಯಪ್ಪ ಭಕ್ತರಿಗೆ ಪ್ರವೇಶ ನಿಷೇಧಿಸಲಾಗಿದೆ. ಕಕ್ಕಿ-ಆನಾತೋಡ್ ಜಲಾಶಯಗಳ ಗೇಟ್ ಗಳನ್ನು ತೆರೆಯಲಾಗಿದೆ. ಪಂಬಾದಲ್ಲಿ ರೆಡ್ ಅಲಾರ್ಟ್ ಘೋಷಿಸಲಾಗಿದೆ ಹೀಗಾಗಿ ಯಾತ್ರಾರ್ಥಿಗಳ ಸುರಕ್ಷತಾ ದೃಷ್ಟಿಯಿಂದಾಗಿ ಶಬರಿಮಲೆ ಯಾತ್ರೆ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯಾ ಎಸ್. ಅಯ್ಯರ್ ಆದೇಶಿಸಿದ್ದಾರೆ.

ಇನ್ನೂ ವರ್ಚುವಲ್ ಕ್ಯೂ ಸಿಸ್ಟಮ್ ಮೂಲಕ ಅಯ್ಯಪ್ಪ ದರ್ಶನಕ್ಕೆ ಬುಕ್ ಮಾಡಿರುವ ಯಾತ್ರಾರ್ಥಿಗಳಿಗೆ ಹವಾಮಾನ ಸರಿಯಾದ ಬಳಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು ಹಾಗಾಗಿ ಭಕ್ತರು ಆತಂಕಕ್ಕೊಳಗಾಗುವುದು ಬೇಡ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…




ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

“ಕೃಷಿ ಕಾಯ್ದೆ ರದ್ದು ಮಾಡುವ ಪರಿಸ್ಥಿತಿ ಬಂದೇ ಬರುತ್ತದೆ” | ನಿಜವಾಯ್ತು ರಾಹುಲ್ ಗಾಂಧಿ ಹೇಳಿಕೆ

ಶ್ರೀಕೃಷ್ಣ ಪರಮಾತ್ಮನ ಕೈ ತುಂಡಾಯಿತು ಎಂದು ವಿಗ್ರಹವನ್ನು ಆಸ್ಪತ್ರೆಗೆ ದಾಖಲಿಸಿದ ಅರ್ಚಕ

ಪ್ರವಾಹಕ್ಕೆ ನಲುಗಿದ ಆಂಧ್ರಪ್ರದೇಶ: 17 ಮಂದಿ ಸಾವು, 100ಕ್ಕೂ ಅಧಿಕ ಮಂದಿ ನಾಪತ್ತೆ

ಆಟೋ—ಲಾರಿ ನಡುವೆ ಭೀಕರ ಅಪಘಾತ: ಇಬ್ಬರು ಮಕ್ಕಳ ಸಹಿತ ಐವರ ದಾರುಣ ಸಾವು

ಕೃಷಿ ಕಾಯ್ದೆ ವಾಪಸ್ | ಪತ್ರಕರ್ತರ ಪ್ರಶ್ನೆಗೆ ನಿರುತ್ತರವಾಗಿ ಮುಂದೆ ನಡೆದ ಸಚಿವೆ ಶೋಭಾ ಕರಂದ್ಲಾಜೆ

ಮಳೆ ಅನಾಹುತ: ಬಹುಮಹಡಿ ಕಟ್ಟಡದ ಗೋಡೆ ಕುಸಿದು 9 ಮಂದಿಯ ದಾರುಣ ಸಾವು

ಬಜ್ಪೆಯ ಪೊರ್ಕೋಡಿಯಲ್ಲಿ ದಲಿತ -ಮುಸ್ಲಿಂ ಸ್ನೇಹ ಸಮ್ಮಿಲನ

ಇತ್ತೀಚಿನ ಸುದ್ದಿ