ಶರಣ್ ಪಂಪ್‌ ವೆಲ್ ಬಂಧನಕ್ಕೆ ಫಾಝಿಲ್ ತಂದೆಯಿಂದ ಕಮಿಷನರ್ ಗೆ ಮನವಿ - Mahanayaka
4:40 PM Wednesday 11 - December 2024

ಶರಣ್ ಪಂಪ್‌ ವೆಲ್ ಬಂಧನಕ್ಕೆ ಫಾಝಿಲ್ ತಂದೆಯಿಂದ ಕಮಿಷನರ್ ಗೆ ಮನವಿ

fazil case
30/01/2023

ಜಿಲ್ಲೆಯಲ್ಲಿ ಪ್ರವೀಣ್ ನೆಟ್ಟಾರು ಹತ್ಯೆಗೆ ಪ್ರತೀಕಾರವಾಗಿ ಫಾಝಿಲ್ ಹತ್ಯೆ ನಡೆಸಲಾಗಿದೆ ಎಂದು ಹೇಳಿಕೆ ನೀಡಿರುವ ವಿಶ್ವ ಹಿಂದೂ ಪರಿಷತ್ತಿನ ಮುಖಂಡ ಶರಣ್ ಪಂಪ್‌ ವೆಲ್ ಅವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಬೇಕು ಎಂದು ಫಾಝಿಲ್ ಅವರ ತಂದೆ ಸುರತ್ಕಲ್‌ ಮಂಗಳಪೇಟೆಯ ಉಮರ್ ಫಾರೂಕ್ ಅವರು ಒತ್ತಾಯಿಸಿದ್ದಾರೆ.

ಅವರು ಇಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಅವರನ್ನು ಭೇಟಿಯಾಗಿ ಈ ಕುರಿತು ಮನವಿ ಸಲ್ಲಿಸಿದರು.

‘ಫಾಝಿಲ್ ಹತ್ಯೆಯನ್ನು ತುಮಕೂರಿನಲ್ಲಿ ಭಾನುವಾರ ನಡೆದ ಸಮಾವೇಶದಲ್ಲಿ ಶರಣ್ ಪಂಪ್‌ವೆಲ್ ಸಮರ್ಥಿಸಿಕೊಂಡಿದ್ದಾರೆ. ನನ್ನ ಮಗನ ಹತ್ಯೆ ವಿಚಾರವಾಗಿ ಅವರಿಗೆ ಹೆಚ್ಚಿನ ಮಾಹಿತಿ ಇದೆ. ಹಾಗಾಗಿ ಅವರನ್ನು ಬಂಧಿಸಿ ವಿಚಾರಣೆಗೊಳಪಡಿಸಬೇಕು’ ಎಂದು ಉಮರ್ ಫಾರೂಕ್ ಒತ್ತಾಯಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ