ದಲಿತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿಯ ಬಂಧನಕ್ಕೆ ಸಚಿವ ದಿನೇಶ್ ಗುಂಡೂರಾವ್ ಗೆ ಮನವಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಠಾಣಾ ವ್ಯಾಪ್ತಿಯ ಅಪ್ರಾಪ್ತ ದಲಿತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಮಹೇಶ್ ಭಟ್ ನನ್ನು ಶೀಘ್ರ ಬಂಧಿಸುವಂತೆ ಒತ್ತಾಯಿಸಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷರಾದ ದಿನೇಶ್ ಮುಳೂರು ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕೆಪಿಪಿಸಿ ಸದಸ್ಯರಾದ ಅಪ್ಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಘಟಕ ಮಾಧ್ಯಮ ವಕ್ತಾರರಾದ ಜಗನಾಥ್ ಲಾಯಿಲ, ಜಿಲ್ಲಾ ಸದಸ್ಯರಾದ ರವಿ ಸುಂಕದಕಟ್ಟೆ ಹಾಗೂ ಸಂಪತ್ ಮಹಾಕಾಳಿ ಪಡ್ಪು, ವಿನಯಚಂದ್ರ, ಕುಮಾರಿ ಜಯಶ್ರೀ ಹಾಗೂ ಇತರರು ಉಪಸ್ಥಿತರಿದ್ದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: