ನಾಪತ್ತೆಯಾಗಿರುವ ಯುವಕನ ಪತ್ತೆಗೆ ಮನವಿ
ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ವರ್ಕಾಡಿ ಗ್ರಾಮದ ನಿವಾಸಿ ಕಿಶನ್ ಕುಮಾರ್ ಶೆಟ್ಟಿ (29 ವರ್ಷ) ಎಂಬವರು 2023ರ ಮಾ.30ರಿಂದ ಕಾಣೆಯಾಗಿರುವ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಹರೆ:
ಎತ್ತರ 5.9 ಅಡಿ, ಗೋಧಿ ಮೈ ಬಣ್ಣ, ಕೋಲು ಮುಖ, ಸಾಧಾರಣ ಶರೀರ ಹೊಂದಿರುತ್ತಾರೆ ಹಾಗೂ ಕಪ್ಪು ತಲೆ ಕೊದಲು ಮತ್ತು ಗಡ್ಡ ಬಿಟ್ಟಿರುತ್ತಾರೆ. ಕಾಣೆಯಾದ ದಿನ ಕಪ್ಪು ಮತ್ತು ಬಿಳಿ ಬಣ್ಣದ ಉದ್ದ ತೋಳಿನ ಶರ್ಟ್ ಮತ್ತು ಕಪ್ಪು ಬಣ್ಣದ ಪ್ಯಾಂಟ್ ಧರಿಸಿದ್ದಾರೆ. ಕನ್ನಡ, ತುಳು ಹಾಗೂ ಇಂಗ್ಲಿಷ್ ಭಾಷೆ ಮಾತನಾಡುತ್ತಾರೆ.
ಕಾಣೆಯಾದ ವ್ಯಕ್ತಿ ಪತ್ತೆಯಾದಲ್ಲಿ ಮಂಗಳೂರಿನ ಕೊಣಾಜೆ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಠಾಣೆಯ ಪೊಲೀಸ್ ಉಪ ನಿರೀಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw