ನೇಕಾರ ಸಮ್ಮಾನ್ ಯೋಜನೆಯಡಿ ಆರ್ಥಿಕ ನೆರವಿಗಾಗಿ ಅರ್ಜಿ ಆಹ್ವಾನ
ಬೆಂಗಳೂರು ನಗರ: ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ 2024-25ನೇ ಸಾಲಿನ ನೇಕಾರ ಸಮ್ಮಾನ್ ಯೋಜನೆಯಡಿ ರಾಜ್ಯದಲ್ಲಿರುವ ಪ್ರತಿ ಕೈಮಗ್ಗ ಮತ್ತು ವಿದ್ಯುತ್ ಮಗ್ಗ ನೇಕಾರರಿಗೆ ವಾರ್ಷಿಕ ರೂ.5000/-ಗಳ ಆರ್ಥಿಕ ನೇರವನ್ನು ನೀಡುವ ಸಲುವಾಗಿ ಸೇವಾ ಸಿಂಧು ಪೋರ್ಟಲ್ ನಲ್ಲಿ ಕೈಮಗ್ಗ, ವಿದ್ಯುತ್ ಮಗ್ಗ ಮತ್ತು ಮಗ್ಗ ಪೂರ್ವ ಘಟಕಗಳ ನೇಕಾರರ ಮಾಹಿತಿಯನ್ನು ಆಪ್ ಲೋಡ್ ಮಾಡಲು ಅನುಕೂಲವಾಗುವಂತೆ ಬೆಂಗಳೂರು ನಗರ ಜಿಲ್ಲೆಯ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಕೈಮಗ್ಗ, ವಿದ್ಯುತ್ ಮಗ್ಗ ಹಾಗೂ ಮಗ್ಗ ಪೂರ್ವ ಘಟಕಗಳ ಮಾಲೀಕರು, ನೇಕಾರರು ಹಾಗೂ ಕಾರ್ಮಿಕರು ಉಪ ನಿರ್ದೇಶಕರ ಕಛೇರಿ, ಕೈಮಗ್ಗ ಮತ್ತು ಜವಳಿ ಇಲಾಖೆ, ಎಸ್.ಜೆ.ಪಿ ಕಾಲೇಜು ಆವರಣ, ಐ.ಟಿ. ಬ್ಲಾಕ್ ಹತ್ತಿರ, ಕೆ.ಆರ್. ಸರ್ಕಲ್, ಬೆಂಗಳೂರು ಇಲ್ಲಿ ಅರ್ಜಿ ಪಡೆದು ಸೂಕ್ತ ದಾಖಲಾತಿಗಳೊಂದಿಗೆ ಅಕ್ಟೋಬರ್ 30 ರೊಳಗೆ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ: ದೂರವಾಣಿ ಸಂಖ್ಯೆ : 080-22341176 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲಾ ಪಂಚಾಯತ್, ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: