ಅಂಚೆ ಇಲಾಖೆಯಲ್ಲಿ ಗ್ರಾಮೀಣ ಅಂಚೆ ಸೇವಕರ ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನ
ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಸಂಬಂಧಿಸಿದಂತೆ ಅಂಚೆ ಕಚೇರಿಯಲ್ಲಿ ಖಾಲಿ ಇರುವ ಶಾಖಾ ಅಂಚೆ ಪಾಲಕ, ಸಹಾಯಕ ಶಾಖಾ ಅಂಚೆಪಾಲಕ ಮತ್ತು ಢಾಕ್ ಸೇವಕ್ ಹುದ್ದೆಗಳಿಗೆ ಆನ್ ಲೈನ್ ಮೂಲಕ ನೇಮಕಾತಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 16.02.2023 ಆಗಿದೆ. ಅರ್ಜಿಗಳನ್ನು ಆನ್ ಲೈನ್ ನಲ್ಲಿ https://indiapostgdsonline.gov.in ಮೂಲಕ ಸಲ್ಲಿಸಬೇಕು. ಬೇರೆ ಯಾವುದೇ ವಿಧಾನದ ಮೂಲಕ ಸಲ್ಲಿಸಿದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಸಂಪೂರ್ಣ ಪ್ರಕ್ರಿಯೆಯು ಜುಲಾಯಿ 2023 ರೊಳಗೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ.
ಗ್ರಾಮೀಣ ಅಂಚೆ ಸೇವಕರ ನೇಮಕಾತಿಯು ಮೊದಲ ಬಾರಿಗೆ, ಅಖಿಲ ಭಾರತ ಮಟ್ಟದಲ್ಲಿ ಬೃಹತ್ ಸಂಖ್ಯೆಯ ಖಾಲಿ ಹುದ್ದೆಗಳೊಂದಿಗೆ ನಡೆಯುತ್ತಿದೆ. ಭಾರತದಾದ್ಯಂತ ಸೂಚಿಸಲಾದ ಒಟ್ಟು ಖಾಲಿ ಹುದ್ದೆಗಳ ಸಂಖ್ಯೆ 40889. ಅದರಲ್ಲಿ 3036 ಕರ್ನಾಟಕಕ್ಕೆ ಸಂಬಂಧಿಸಿದೆ.
ಮಂಗಳೂರು ವಿಭಾಗದಲ್ಲಿ ಒಟ್ಟು 95 ಹುದ್ದೆಗಳು ಖಾಲಿ ಇದ್ದು ಆನ್ ಲೈನ್ ಮೂಲಕ ನೇಮಕಾತಿ ಪ್ರಕ್ರಿಯೆಯಲ್ಲಿ ತುಂಬಲ್ಪಡುತ್ತದೆ. ಈ ಹುದ್ದೆಗಳ ವಿವರಗಳನ್ನು ಅನುಬಂಧ 1 ರಲ್ಲಿ ನೀಡಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw