ಜನಪರ ಉತ್ಸವಕ್ಕೆ ಪರಿಶಿಷ್ಟ ಜಾತಿಯ ಕಲಾವಿದರಿಂದ ಅರ್ಜಿ ಆಹ್ವಾನ - Mahanayaka

ಜನಪರ ಉತ್ಸವಕ್ಕೆ ಪರಿಶಿಷ್ಟ ಜಾತಿಯ ಕಲಾವಿದರಿಂದ ಅರ್ಜಿ ಆಹ್ವಾನ

cultural programme
04/11/2023

ಮಂಗಳೂರು:  ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ವಿಶೇಷ ಘಟಕ ಯೋಜನೆಯಡಿ ಆಯೋಜಿಸಲಾಗುವ ಜನಪರ ಉತ್ಸವ ಕಾರ್ಯಕ್ರಮದಲ್ಲಿ ಯಕ್ಷಗಾನ, ನಾಟಕ, ಶಾಸ್ತ್ರೀಯ, ನೃತ್ಯ, ಜಾನಪದ ಪ್ರದರ್ಶನ ಕಲಾ ತಂಡಗಳು, ದಾಸರ ಪದಗಳು, ತತ್ವಪದ, ಗೀಗಿಪದ, ಕರ್ನಾಟಕ ಶಾಸ್ತ್ರೀಯ ಸಂಗೀತ, ಹಿಂದುಸ್ಥಾನಿ ವಾದ್ಯ ಸಂಗೀತ, ಹಾಡುಗಾರಿಕೆ, ಕರ್ನಾಟಕ ವಾದ್ಯ ಸಂಗೀತ ಕಾರ್ಯಕ್ರಮದಲ್ಲಿ ಪರಿಶಿಷ್ಟ ಜಾತಿಯ ಕಲಾವಿದರಿಗೆ ಭಾಗವಹಿಸಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಜಾತಿ ಪ್ರಮಾಣ ಪತ್ರದೊಂದಿಗೆ ಹಿಂದೆ ಕಾರ್ಯಕ್ರಮ ನೀಡಿದ ಸೂಕ್ತ ದಾಖಲೆಗಳೊಂದಿಗೆ ಅರ್ಜಿಯನ್ನು ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ತುಳು ಭವನ, ಉರ್ವಸ್ಟೋರ್ ಮಂಗಳೂರು ಇಲ್ಲಿಗೆ ನವೆಂಬರ್ 10 ರೊಳಗೆ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ದೂ: 0824-2451527,2951327 ಸಂಪರ್ಕಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Provided by

ಇತ್ತೀಚಿನ ಸುದ್ದಿ