PHD ಅಧ್ಯಯನ ನಿರತ ಅಭ್ಯರ್ಥಿಗಳಿಗೆ ಮಾಸಿಕ ವ್ಯಾಸಂಗ ವೇತನ, ಪೆಲೋಶಿಪ್‍ ಗಾಗಿ ಅರ್ಜಿ ಆಹ್ವಾನ - Mahanayaka

PHD ಅಧ್ಯಯನ ನಿರತ ಅಭ್ಯರ್ಥಿಗಳಿಗೆ ಮಾಸಿಕ ವ್ಯಾಸಂಗ ವೇತನ, ಪೆಲೋಶಿಪ್‍ ಗಾಗಿ ಅರ್ಜಿ ಆಹ್ವಾನ

phd
01/01/2025

ಧಾರವಾಡ: 2024–25 ನೇ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿಎಚ್‍ ಡಿ ಅಧ್ಯಯನ ಪ್ರಾರಂಭಿಸಿರುವ ಅಂದರೆ ಜ.10, 2024 ಮತ್ತು ಅದರ ನಂತರ ಪ್ರಥಮ ವರ್ಷದ ಪಿಎಚ್‍ ಡಿ ಪ್ರಾರಂಭಿಸಿರುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ–1, 2ಎ, 3ಎ, ಮತ್ತು 3ಬಿ ಸೇರಿದ ಅರ್ಹ ಅಭ್ಯರ್ಥಿಗಳಿಂದ ಮಾಸಿಕ ವ್ಯಾಸಂಗ ವೇತನ, ಪೆಲೋಶಿಪ್‍(Monthly Tuition Stipend, Fellowship)ಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕದ ಶಾಸನಬದ್ದ ವಿಶ್ವವಿದ್ಯಾಲಯಗಳ ಅಧೀನಕ್ಕೆ ಒಳಪಡುವ ಸಂಸ್ಥೆಗಳಲ್ಲಿ ಪ್ರಥಮ ವರ್ಷದ ಪಿಎಚ್‍ ಡಿ(PHD) ಅಧ್ಯಯನ ಮಾಡುತ್ತಿರುವ ಅಭ್ಯರ್ಥಿಗಳು ಆಫ್‍ ಲೈನ್ ಮೂಲಕ ಜನವರಿ 20, 2025 ರೊಳಗಾಗಿ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 8050770004 ಗೆ ಅಥವಾ ಇಲಾಖಾ ವೆಬ್‍ ಸೈಟ್ https://bcwd.karnataka.gov.in   ಅನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ