ಅಪ್ರಾಪ್ತೆಗೆ ಲೈಂಗಿಕ ಕಿರುಕುಳ: ಅಪರಾಧಿಗೆ 2 ವರ್ಷ ಜೈಲು ಶಿಕ್ಷೆ
ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಅಪರಾಧಿಗೆ ಎರಡು ವರ್ಷ ಜೈಲು ಶಿಕ್ಷೆ ನೀಡಿ ಚಾಮರಾಜನಗರದ ಮಕ್ಕಳ ಸ್ನೇಹಿ ನ್ಯಾಯಾಲಯವು ಇಂದು ಸಂಜೆ ಆದೇಶ ನೀಡಿದೆ.
ಹನೂರು ತಾಲೂಕಿನ ಮಂಗಲ ಗ್ರಾಮದ ರಮೇಶ್ ಶಿಕ್ಷೆಗೊಳಗಾದ ಅಪರಾಧಿ. 2020 ರ ಸೆಪ್ಟೆಂಬರ್ ನಲ್ಲಿ ಅಪ್ರಾಪ್ತೆ ಒಬ್ಬಳಿಗೆ ಪ್ರೀತಿಸು ಎಂದು ಬಲವಂತ ಮಾಡಿ, ಇಲ್ಲದ ಆಸೆ ತೋರಿಸಿ ಲೈಂಗಿಕ ದೌರ್ಜನ್ಯ ಎಸಗಿರುವುದು ಸಾಬೀತಾದ ಹಿನ್ನೆಲೆಯಲ್ಲಿ ಮಕ್ಕಳ ಸ್ನೇಹಿ ನ್ಯಾಯಾಲಯ ಹಾಗೂ 1 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಧೀಶರಾದ ನಿಶಾರಾಣಿ ಅವರು ಅಪರಾಧಿಗೆ ಎರಡು ವರ್ಷ ಶಿಕ್ಷೆ, 5 ಸಾವಿರ ರೂ. ದಂಡ ವಿಧಿಸಿದ್ದಾರೆ.
ನೊಂದ ಬಾಲಕಿಗೆ ಕಾನೂನು ಸೇವಾ ಪ್ರಾಧಿಕಾರದಿಂದ 20 ಸಾವಿರ ರೂ. ಪರಿಹಾರ ಕೊಡಬೇಕೆಂದು ಸೂಚಿಸಿದ್ದಾರೆ.ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರಾದ ಕೆ.ಯೋಗೆಶ್ ವಾದ ಮಂಡಿಸಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LG00SlXNdBFJ1LFb3E40gL
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw