ರೈಲಿನಲ್ಲಿ ಅಪ್ರಾಪ್ತೆಗೆ ಮೇಲೆ ಲೈಂಗಿಕ ಕಿರುಕುಳ ನಡೆಸಿದವನಿಗೆ 5 ವರ್ಷ ಜೈಲು ಶಿಕ್ಷೆ - Mahanayaka
11:49 PM Tuesday 23 - December 2025

ರೈಲಿನಲ್ಲಿ ಅಪ್ರಾಪ್ತೆಗೆ ಮೇಲೆ ಲೈಂಗಿಕ ಕಿರುಕುಳ ನಡೆಸಿದವನಿಗೆ 5 ವರ್ಷ ಜೈಲು ಶಿಕ್ಷೆ

chamarajanagara
05/10/2021

ಚಾಮರಾಜನಗರ: ಬಾಲಕಿಗೆ ಲೈಂಗಿಕ ಹಲ್ಲೆ ಮತ್ತು ಕಿರುಕುಳ ನೀಡಿದ ಅಪರಾಧಿಗೆ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್‌ ನ್ಯಾಯಾಲಯ ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಿ ಸೋಮವಾರ ಆದೇಶ ಹೊರಡಿಸಿದ್ದು, ಗುಂಡ್ಲುಪೇಟೆಯ ಕುಮಾರ್‌ ಅಲಿಯಾಸ್‌ ಧ್ರುವ ಎಂಬಾತನಿಗೆ ಕೋರ್ಟ್ ಈ ಶಿಕ್ಷೆ ವಿಧಿಸಿದೆ.

2019ರ ಫೆಬ್ರುವರಿ 17ರಂದು ಈ ಘಟನೆ ನಡೆದಿತ್ತು. ಕುಮಾರ್‌, 17 ವರ್ಷದ ಬಾಲಕಿಯನ್ನು ತಿರುಪತಿಗೆ ಕರೆದುಕೊಂಡು ಹೋಗಿದ್ದ. ರೈಲಿನಲ್ಲಿ ವಾಪಸ್‌ ಬರುತ್ತಿರುವಾಗ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಹಾಗೂ ಕಿರುಕುಳ ನೀಡಿದ್ದ. ಈ ಸಂಬಂಧ ಗುಂಡ್ಲುಪೇಟೆ ಠಾಣೆಯಲ್ಲಿ ಪೋಕ್ಸೊ ಅಡಿ ಪ್ರಕರಣ ದಾಖಲಾಗಿತ್ತು.

ಘಟನೆಯನ್ನು ತನಿಖೆ ನಡೆಸಿದ್ದ ಪೊಲೀಸರು ಕುಮಾರ್ ವಿರುದ್ಧ ಆರೋಪ ಪಟ್ಟಿ ಸಲ್ಲಿಸಿದ್ದರು. ಎಲ್ಲ ಆರೋಪಗಳು ಸಾಬೀತಾಗಿರುವ ಕಾರಣ, ಕುಮಾರ್‌ ನನ್ನು ಅಪರಾಧಿ ಎಂದು ಘೋಷಿಸಿರುವ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್‌ ನ್ಯಾಯಾಧೀಶ ಸದಾಶಿವ ಎಸ್‌.ಸುಲ್ತಾನ್ ಪುರಿ ಅವರು, ಆ‌ತನಿಗೆ ಐದು ವರ್ಷಗಳ ಸಾದಾ ಶಿಕ್ಷೆ ಹಾಗೂ1 ಲಕ್ಷ ರೂಪಾಯಿ ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GprkhpfFmuL8YDKlAEmru9

ಇನ್ನಷ್ಟು ಸುದ್ದಿಗಳು…

ಆರ್ಯನ್ ಖಾನ್ ಜೊತೆಗೆ ರೇವ್ ಪಾರ್ಟಿಯಲ್ಲಿ ಸಿಕ್ಕಿ ಬಿದ್ದ ಮಾಡೆಲ್ ಯಾರು ಗೊತ್ತಾ?

ವಿಶ್ವಾದ್ಯಂತ ವಾಟ್ಸಾಪ್, ಫೇಸ್ ಬುಕ್ ಸೇರಿದಂತೆ ಹಲವು ಸಾಮಾಜಿಕ ಜಾಲತಾಣ ಸ್ಥಗಿತ!

ಮೀನುಗಾರರ ಬಲೆಗೆ ಬಿತ್ತು ಬೃಹತ್ ಗಾತ್ರದ ಹೆಲಿಕಾಫ್ಟರ್ ಮೀನು!

ಕಾಂಗ್ರೆಸ್ ಗೆ ಭವಿಷ್ಯವಿಲ್ಲ, ರಾಷ್ಟ್ರಮಟ್ಟದಲ್ಲಿ ಒಡೆದು ಚೂರಾಗುತ್ತಿದೆ | ಸಚಿವ ಅಶ್ವಥ್ ನಾರಾಯಣ್

ಉತ್ತರ ಪ್ರದೇಶದಲ್ಲಿ ರಾಮ ರಾಜ್ಯವಿಲ್ಲ, ಕೊಲೆಗಡುಕ ಸರ್ಕಾರವಿದೆ: ಮಮತಾ ಬ್ಯಾನರ್ಜಿ ಕಿಡಿ

ಈ ಬಾರಿಯೂ ಸಿಗಲಿಲ್ಲ ಬಿಜೆಪಿ ಟಿಕೆಟ್: ಮಹತ್ವದ ತೀರ್ಮಾನ ಕೈಗೊಂಡ ಪ್ರಮೋದ್ ಮುತಾಲಿಕ್

ಇತ್ತೀಚಿನ ಸುದ್ದಿ