ಅಪ್ರಾಪ್ತೆಯ ಜೊತೆ ದೈಹಿಕ ಸಂಪರ್ಕ, ಮದುವೆ: ಆರೋಪಿಗೆ 10 ವರ್ಷ ಜೈಲು, 10 ಸಾವಿರ ದಂಡ - Mahanayaka

ಅಪ್ರಾಪ್ತೆಯ ಜೊತೆ ದೈಹಿಕ ಸಂಪರ್ಕ, ಮದುವೆ: ಆರೋಪಿಗೆ 10 ವರ್ಷ ಜೈಲು, 10 ಸಾವಿರ ದಂಡ

judgement
06/07/2021

ಶಿವಮೊಗ್ಗ: ಅಪ್ರಾಪ್ತ ಬಾಲಕಿಯನ್ನು ಪ್ರೀತಿಸುವುದಾಗಿ ನಂಬಿಸಿ, ಆಕೆಯ ಜೊತೆಗೆ ದೈಹಿಕ ಸಂಬಂಧ ಬೆಳೆಸಿದ ಯುವಕನೋರ್ವ ಆಕೆ ಗರ್ಭಿಣಿಯಾದ ಬಳಿಕ ಆಕೆಯನ್ನು ವಿವಾಹವಾಗಿದ್ದು, ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ 10 ವರ್ಷ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.


Provided by

ಜಿಲ್ಲೆಯ ಯಲವಟ್ಟಿ ತಾಂಡದ 30 ವರ್ಷ ವಯಸ್ಸಿನ ಎಸ್.ಆರ್.ಬೀರೇಶ್, ಭದ್ರಾವತಿಯ ಚೌಡೇಶ್ವರಿ ದೇವಸ್ಥಾನದಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು  2017ರ ಜೂನ್ ನಲ್ಲಿ ಮದುವೆಯಾಗಿದ್ದ.  ಈ ಘಟನೆಯ ಮಾಹಿತಿ ದೊರೆಯುತ್ತಿದ್ದಂತೆಯೇ ಐಪಿಸಿ ಕಾಲಂ 366, 376(2) ಎನ್, ಪೋಕ್ಸೊ ಕಾಯ್ದೆ ಮತ್ತು ಬಾಲ್ಯ ವಿವಾಹ ಕಾಯ್ದೆಯಡಿಯಲ್ಲಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಪ್ರಕರಣ ತನಿಖೆ ನಡೆಸಿದ್ದ ಎಫ್ ಟಿಎಸ್ ಸಿ ನ್ಯಾಯಾಲಯದ ನ್ಯಾಯಾಧೀಶ ದಯಾನಂದ ಅವರು, ಆರೋಪಿಗೆ 10 ವರ್ಷ ಜೈಲು ಶಿಕ್ಷೆ ಹಾಗೂ 10 ಸಾವಿರ ರೂಪಾಯಿ ದಂಡ ವಿಧಿಸಿ ಆದೇಶ ನೀಡಿದ್ದಾರೆ  ಎಂದು ವರದಿಯಾಗಿದೆ.

ಇತ್ತೀಚಿನ ಸುದ್ದಿ