ಅಪ್ರಾಪ್ತೆಯೊಂದಿಗೆ ಪ್ರೀತಿಯಲ್ಲಿ ಬಿದ್ದಿದ್ದ ಯುವಕ ಆತ್ಮಹತ್ಯೆಗೆ ಶರಣು

ಬೆಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಪ್ರೀತಿಸುತ್ತಿದ್ದ ಯುವಕನೋರ್ವ ಪ್ರೇಮ ವೈಫಲ್ಯದ ಹಿನ್ನೆಲೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿರುವ ಘಟನೆ ವಿದ್ಯಾರಣ್ಯಪುರ ಎಂಬಲ್ಲಿ ನಡೆದಿದೆ.
ಪ್ರೇಯಸಿಗಾಗಿ ಮನೆ ಬಿಟ್ಟು ಬಂದಿದ್ದ ಯುವಕ ಆಕೆಯನ್ನು ಪಿಜಿಯೊಂದರಲ್ಲಿ ಇರಿಸಿ ವಿದ್ಯಾಭ್ಯಾಸದ ವೆಚ್ಚವನ್ನು ಭರಿಸುತ್ತಿದ್ದ ಎನ್ನಲಾಗಿದೆ. ಆದರೆ ಬಾಲಕಿಯು ಇತ್ತೀಚೆಗೆ ವಿದ್ಯಾಭ್ಯಾಸವನ್ನು ಅರ್ಧಕ್ಕೆ ನಿಲ್ಲಿಸಿ ಕಾಲ್ ಸೆಂಟರ್ ನಲ್ಲಿ ಕೆಲಸಕ್ಕೆ ಸೇರಿದ್ದಳು ಎನ್ನಲಾಗಿದೆ.
ಕೆಲಸಕ್ಕೆ ಸೇರಿದ ಬಳಿಕ ಬಾಲಕಿಯು ಯುವಕನ್ನು ನಿರ್ಲಕ್ಷ್ಯ ಮಾಡಿದ್ದಾಳೆ ಎನ್ನಲಾಗಿದೆ. ಇದರಿಂದ ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗಿದೆ. ಘಟನೆ ಸಂಬಂಧ ವಿದ್ಯಾರಣ್ಯಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಈ ಸಂಬಂಧ ತನಿಖೆ ನಡೆಸುತ್ತಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಮಂಗಳೂರು: 1.92 ಕೋ.ರೂ. ಮೌಲ್ಯದ ಅಮಾನ್ಯ ನೋಟುಗಳು ಪತ್ತೆ
ಕೃಷಿ ಕಾಯ್ದೆ ವಾಪಸ್ | ಪತ್ರಕರ್ತರ ಪ್ರಶ್ನೆಗೆ ನಿರುತ್ತರವಾಗಿ ಮುಂದೆ ನಡೆದ ಸಚಿವೆ ಶೋಭಾ ಕರಂದ್ಲಾಜೆ
ಬಜ್ಪೆಯ ಪೊರ್ಕೋಡಿಯಲ್ಲಿ ದಲಿತ -ಮುಸ್ಲಿಂ ಸ್ನೇಹ ಸಮ್ಮಿಲನ
ಮಳೆ ಅನಾಹುತ: ಬಹುಮಹಡಿ ಕಟ್ಟಡದ ಗೋಡೆ ಕುಸಿದು 9 ಮಂದಿಯ ದಾರುಣ ಸಾವು
ವಿವಾದಿತ ಕಾಯ್ದೆ ವಾಪಸ್ ಪಡೆಯುತ್ತೇವೆ ಎಂದರೂ ಆಂದೋಲನ ಮುಂದುವರಿಸಿದ ರೈತರು: ಕಾರಣ ಏನು ಗೊತ್ತಾ?
ರಾಜ್ಯಾದ್ಯಂತ ಭಾರೀ ಮಳೆ ಸಾಧ್ಯತೆ | 6 ಜಿಲ್ಲೆಗಳಲ್ಲಿ ರೆಡ್ ಅಲಾರ್ಟ್ ಘೋಷಣೆ: ಶಾಲೆಗಳಿಗೆ ರಜೆ ಘೋಷಣೆ