ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಲೆ - Mahanayaka
11:16 AM Thursday 12 - December 2024

ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಲೆ

rape
22/02/2022

ಸೂರತ್: 11 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಹತ್ಯೆಗೈದಿರುವ ಘಟನೆ ಸೂರತ್ ಜಿಲ್ಲೆಯ ಜೋಲ್ವಾ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಸಂತ್ರಸ್ತೆಯ ತಾಯಿ ಅನುಮಾನಗೊಂಡಿದ್ದ ಇಬ್ಬರನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಬಾಲಕಿಯರ ಪೋಷಕರು ದಿನಗೂಲಿ ಕಾರ್ಮಿಕರಾಗಿದ್ದು, ತಮ್ಮ ಮಗಳು ಕಾಣೆಯಾಗಿರುವುದನ್ನು ತಿಳಿದು ಹುಡುಕಾಟ ನಡೆಸಿದ್ದಾರೆ. ಈ ವೇಳೆ ತಮ್ಮ ಮನೆಯ ಸಮೀಪದಲ್ಲಿರುವ ಕಟ್ಟಡದ ಕೊಠಡಿಯಲ್ಲಿ ಬಾಲಕಿಯ ಶವ ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನು ಪತ್ತೆಯಾಗಿದೆ. ತಕ್ಷಣ ಆಕೆಯನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ಯಲಾಗಿತ್ತಾದರೂ ಬಾಲಕಿ ಚಿಕಿತ್ಸೆ ಫಲಾಕಾರಿಯಾಗದೇ ಮೃತಪಟ್ಟಿದ್ದಾಳೆ ಎಂದು ವೈದ್ಯರು ತಿಳಿಸಿದ್ದಾರೆ.

ಇದೀಗ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸೂರತ್‍ನ ಹೊಸ ಸಿವಿಲ್ ಆಸ್ಪತ್ರೆಗೆ ಕಳುಹಿಸಲಾಗಿದೆ. ಈ ಪ್ರಕರಣ ಕುರಿತು ಬಾಲಕಿ ಕುಟುಂಬಸ್ಥರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಬಸವೇಶ್ವರ ದೇವಸ್ಥಾನದಲ್ಲೊಂದು ವಿಶೇಷ ವಿವಾಹ

ಪ್ರತಿ ಹತ್ಯೆಗೆ ಸಿದ್ದರಾಮಯ್ಯಗೆ ಬೈಯ್ಯುತ್ತಿದ್ದೆವು, ಈಗ ನಾಚಿಕೆಯಾಗುತ್ತಿದೆ | ಪ್ರತಾಪ್ ಸಿಂಹ ಹೇಳಿದ್ದೇನು?

ಸಂಬಂಧಿಕರ ಮುಂದೆಯೇ ಸಿಪಿಎಂ ಕಾರ್ಯಕರ್ತನ ಭೀಕರ ಕೊಲೆ

ಮೃತ ಹರ್ಷನ ವಿರುದ್ದ ನಾಲ್ಕು ಪ್ರಕರಣ ದಾಖಲಾಗಿದ್ದವು

ಇತ್ತೀಚಿನ ಸುದ್ದಿ