ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಐವರು ಆರೋಪಿಗಳ ಬಂಧನ
ಲಕ್ನೋ: ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಲಕ್ನೋನಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಾಲಕಿಯ ಸಹೋದರ ನೀಡಿದ ದೂರಿನನ್ವಯ ಐವರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಪ್ರಕರಣದ ಕುರಿತು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಕುಮಾರ್ ಸಿಂಗ್ ತಿಳಿಸಿದ್ದಾರೆ.
ಶನಿವಾರ ರಾತ್ರಿ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು, ಬಾಲಕಿ ತನ್ನ ಪೋಷಕರಿಗೆ ನಡೆದ ಘಟನೆ ತಿಳಿಸಿದ್ದಾಳೆ. ತಕ್ಷಣವೇ ಆಕೆಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಮೊಹಮ್ಮದಿ ಪೊಲೀಸ್ ಠಾಣೆಯಲ್ಲಿ ಕೇಸ್ ಕೂಡ ದಾಖಲು ಮಾಡಲಾಯಿತು.
ಘಟನೆಗೆ ಸಂಬಂಧಿಸಿದಂತೆ ಕ್ಷಿಪ್ರವಾಗಿ ತನಿಖೆ ಆರಂಭಿಸಿದ ಪೊಲೀಸರು ಐವರನ್ನು ಬಂಧಿಸಿದ್ದಾರೆ. ಸಂತ್ರಸ್ತ ಬಾಲಕಿಯು ಆರೋಪಿಗಳ ಗುರುತು ಪತ್ತೆ ಮಾಡಿದ್ದಾಲೆ. ಸದ್ಯ ಆರೋಪಿಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka