ಕಠಿಣ ಕ್ರಮ!: ಆರಗ ಜ್ಞಾನೇಂದ್ರ ನಿವಾಸಕ್ಕೆ ಎಬಿವಿಪಿ ಮುತ್ತಿಗೆ ವಿಚಾರ: ಇಬ್ಬರು ಪೊಲೀಸ್ ಅಧಿಕಾರಿಗಳ ಅಮಾನತು
ಬೆಂಗಳೂರು: ಎಬಿವಿಪಿ ಕಾರ್ಯಕರ್ತರು ಗೃಹ ಸಚಿವ ಅರಗ ಜ್ಞಾನೇಂದ್ರ ನಿವಾಸಕ್ಕೆ ಮುತ್ತಿಗೆ ಹಾಕಿದ ಪ್ರಕರಣಕ್ಕೆ ಸಂಧಿಸಿದಂತೆ ಕರ್ತವ್ಯ ಲೋಪದಡಿ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.
ಪಿಎಸ್ ಐಗಳಾದ ರಾಜಸಾಬ್ ಹಾಗೂ ಎಸ್ ಐ ಶ್ರೀನಿವಾಸ್ ಮೂರ್ತಿಅವರನ್ನು ಅಮಾನತು ಮಾಡಿ ಉತ್ತರ ವಿಭಾಗದ ಡಿಸಿಪಿ ವಿನಾಯಕ್ ಪಾಟೀಲ್ ಆದೇಶ ನೀಡಿದ್ದಾರೆ.
ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಇಂದು ಎಬಿವಿಪಿ ಕಾರ್ಯಕರ್ತರು ಆರಗ ಜ್ಞಾನೇಂದ್ರ ನಿವಾಸಕ್ಕೆ ಮುತ್ತಿಗೆ ಹಾಕಿ ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದರು. ಈ ವೇಳೆ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಪರಿಸ್ಥಿತಿ ಹತೋಟಿಗೆ ತಂದಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳ ಮೇಲೆ ಕರ್ತವ್ಯ ಲೋಪದ ಆರೋಪದಡಿ ಅಮಾನತು ಮಾಡಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka