ಮದುವೆ ಆರತಕ್ಷತೆ ವೇಳೆ ಕುಸಿದ ಬಿದ್ದ ವಧುವಿನ ಮೆದುಳು ನಿಷ್ಕಿಯ: ಪೋಷಕರಿಂದ ಅಂಗಾಂಗ ದಾನಕ್ಕೆ ನಿರ್ಧಾರ

chaithra
12/02/2022

ಕೋಲಾರ: ಮದುವೆ ಆರತಕ್ಷತೆ ವೇಳೆ ಕುಸಿದು ಬಿದ್ದು ಅಸ್ವಸ್ಥಳಾಗಿದ್ದ ಮದುಮಗಳು ಸಾವಿನ ಹೊಸ್ತಿಲಲ್ಲಿರುವ ಆತಂಕಕಾರಿ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ ನಡೆದಿದೆ.

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಮೂಲದ ಚೈತ್ರಾ (26) ಮದುವೆ ಆರತಕ್ಷತೆಯ ವೇಳೆ ಕುಸಿದು ಬಿದ್ದು ಅಸ್ವಸ್ಥಗೊಂಡಿದ್ದರು. ತಕ್ಷಣ ಆಕೆಯನ್ನು ನಿಮ್ಹಾನ್ಸ್​ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಆಕೆಯ ಮೆದುಳು ನಿಷ್ಕ್ರಿಯಗೊಂಡಿದೆ ಎಂದು ವೈದ್ಯರು ಘೋಷಸಿದರು.

ಹೃದಯವಿದ್ರಾವಕ ದುರಂತದ ನಡುವೆಯೂ ಆಕೆಯ ಪೋಷಕರು ಮಗಳ ಅಂಗಾಂಗಗಳನ್ನು ದಾನ ಮಾಡಲು ನಿರ್ಧರಿಸಿದ್ದಾರೆ. ಇದೊಂದು ಉದಾತ್ತ ಕಾರ್ಯವಾಗಿದ್ದು, ಎಲ್ಲರಿಗೂ ಮಾದರಿಯಾಗಬೇಕು. ಚೈತ್ರಾ ಅನೇಕ ಜೀವಗಳನ್ನು ಉಳಿಸುತ್ತಿದ್ದಾರೆ. ನಿಮ್ಹಾನ್ಸ್‌ ನಲ್ಲಿ ಇದು ಮೊದಲ ಅಂಗಾಂಗ ಹಿಂಪಡೆಯುವಿಕೆಯಾಗಿದೆ ಎಂದು ಸುಧಾಕರ್​ ಟ್ವೀಟ್​ ಮಾಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಮದುವೆ ಮಾಡಿಸಿಲ್ಲ ಎಂದು ತಂದೆಯನ್ನೇ ಕೊಂದ ಪಾಪಿ ಮಗ!

ಪಾರ್ಥೀವ ಶರೀರದಂತೆ ಮಲಗಿ ಟೋಲ್ ಗೇಟ್ ಅನ್ಯಾಯ ಪ್ರಶ್ನಿಸಿದ ಆಸಿಫ್ ಆಪತ್ಬಾಂಧವ

ಎಚ್‌ಐವಿ ಹೊಂದಿದ್ದ ತಂದೆಯಿಂದಲೇ ಮಗಳ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಗೂಗಲ್ ಮ್ಯಾಪ್ ನೋಡಿ ಕಾರು ಚಾಲನೆ: ಕಾಲುವೆಗೆ ಬಿದ್ದು, 3 ಮಂದಿ ಸಾವು

ಇತ್ತೀಚಿನ ಸುದ್ದಿ

Exit mobile version