ನಿಯಮ ಪಾಲಿಸದ  ಅರೆಬಿಕ್ ಶಾಲೆಗಳ ವಿರುದ್ಧ ಸಮೀಕ್ಷೆ: ಸಚಿವ ಬಿ.ಸಿ.ನಾಗೇಶ್ - Mahanayaka
6:15 PM Wednesday 11 - December 2024

ನಿಯಮ ಪಾಲಿಸದ  ಅರೆಬಿಕ್ ಶಾಲೆಗಳ ವಿರುದ್ಧ ಸಮೀಕ್ಷೆ: ಸಚಿವ ಬಿ.ಸಿ.ನಾಗೇಶ್

b c nagesh
28/10/2022

ಬೆಂಗಳೂರು: ರಾಜ್ಯದಲ್ಲಿನ ಹಲವು ಅರಬಿ ಶಾಲೆಗಳು ಶಿಕ್ಷಣ ಇಲಾಖೆಯ ನಿಯಮವನ್ನು ಪಾಲಿಸದೆ ಇರುವುದು ಕಂಡು ಬಂದಿದ್ದು, ಈ ಹಿನ್ನೆಲೆಯಲ್ಲಿ ಆ ಶಾಲೆಗಳ ವಿರುದ್ದ ಸಮೀಕ್ಷೆ ನಡೆಸಲು ನಿರ್ಧರಿಸಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಹೇಳಿದ್ದಾರೆ.

ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಚ್ಚಿನ ಅರೇಬಿಕ್ ಶಾಲೆಗಳು ರಾಜ್ಯ ಶಿಕ್ಷಣ ಇಲಾಖೆಯು ಸೂಚಿಸುವ ಯಾವುದೇ ನಿಯಮಗಳನ್ನೂ ಅನುಸರಿಸುತ್ತಿಲ್ಲ ಎಂಬುದು ಕಂಡು ಬಂದಿದೆ. ಹೀಗಾಗಿ ಅದನ್ನು ಪರಿಶೀಲಿಸಲು ಸಹಾಯಕ ಆಯುಕ್ತರಿಗೆ ಸೂಚನೆ ನೀಡಲಾಗಿದೆ ಎಂದರು.

ರಾಜ್ಯದಲ್ಲಿ 106 ಅನುದಾನಿತ ಹಾಗೂ 80 ಅನುದಾನರಹಿತ ಅರೇಬಿಕ್ ಶಾಲೆಗಳಿವೆ. ಅಲ್ಲಿ ಶಿಕ್ಷಣ ಇಲಾಖೆಯ ಪಠ್ಯಕ್ರಮದಂತೆ ಬೋಧನೆ ನಡೆಯುತ್ತಿಲ್ಲ ಎಂಬ ಆರೋಪಗಳಿವೆ ಎಂದ ಅವರು, ಬಹಳಷ್ಟು ಅರೇಬಿಕ್‌ ಶಾಲೆಗಳಲ್ಲಿ ಭಾಷೆ, ವಿಜ್ಞಾನದ ಕಲಿಕೆ ನಡೆಯುತ್ತಿಲ್ಲ. ಈ ಶಾಲೆಗಳಿಗೆ ಪ್ರತಿವರ್ಷ ಸುಮಾರು 27 ಸಾವಿರ ಮಕ್ಕಳು ಸೇರುತ್ತಾರೆ. ಎಸ್ಸೆಸ್ಸೆಲ್ಸಿ ವೇಳೆಗೆ 2 ಸಾವಿರ ವಿದ್ಯಾರ್ಥಿಗಳಷ್ಟೇ ಇರುತ್ತಾರೆ. ದಾಖಲಾಗುವ ಮತ್ತು ಹಾಜರಾಗುವವರ ಸಂಖ್ಯೆಯಲ್ಲಿ ಭಾರೀ ವ್ಯತ್ಯಾಸವಿದೆ. ನಿರ್ದಿಷ್ಟ ಧರ್ಮದ ಮಕ್ಕಳು ಶಾಲೆಗಳಿಂದ ಹೊರಗುಳಿಯುತ್ತಿದ್ದಾರೆ. ಇದಾಗಬಾರದು ಎಂದು ಅವರು ಹೇಳಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ