ಅರ್ಜಿ ನೀಡಲು ಬಂದ ಮಹಿಳೆಗೆ ಕಿರುಕುಳ: ಗ್ರಾ.ಪಂ. ಸದಸ್ಯನ ವಿರುದ್ಧ ದೂರು
ಉಳ್ಳಾಲ: ಅರ್ಜಿ ನೀಡಲು ಬಂದ ಮಹಿಳೆಯನ್ನು ಕೊಠಡಿಗೆ ಕರೆಸಿ, ಕಿರುಕುಳ ನೀಡಿದ ಆರೋಪದಲ್ಲಿ ಗ್ರಾ.ಪಂ. ಸದಸ್ಯನ ವಿರುದ್ಧ ಪ್ರಕರಣ ದಾಖಲಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದಲ್ಲಿ ನಡೆದಿದೆ.
ಇಲ್ಲಿನ ಮುನ್ನೂರು ಗ್ರಾ.ಪಂ. ಸದಸ್ಯ ಬಾಬು ಶೆಟ್ಟಿಯ ವಿರುದ್ಧ ಈ ಸಂಬಂಧ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಿವೇಶನ ರಹಿತ ಮಹಿಳೆಯೊಬ್ಬರು ಸೆ.18ರಂದು ಸೈಟ್ ಗೆ ಅರ್ಜಿ ನೀಡಲು ಮುನ್ನೂರು ಗ್ರಾ.ಪಂ.ಗೆ ತೆರಳಿದ್ದರು. ಈ ವೇಳೆ ಆರೋಪಿ ಬಾಬು ಅವರನ್ನು ಅಧ್ಯಕ್ಷರ ಕೊಠಡಿಗೆ ಕರೆಸಿ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.
ಘಟನೆ ಸಂಬಂಧ ತನಿಖೆ ನಡೆಸುವಂತೆ ಡಿವೈಎಫ್ ಐ ಮುನ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷರಿಗೆ ಮನವಿ ಸಲ್ಲಿಸಿತ್ತು. ಈ ಹಿನ್ನೆಲೆಯಲ್ಲಿ ಮಹಿಳೆ ಉಳ್ಳಾಲ ಠಾಣೆತಯಲ್ಲಿ ಘಟನೆ ನಡೆದು ಕೆಲವು ದಿನಗಳ ನಂತರ ದೂರು ನೀಡಿದ್ದು, ಇದೀಗ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GprkhpfFmuL8YDKlAEmru9
ಇನ್ನಷ್ಟು ಸುದ್ದಿಗಳು…
2,700 ವರ್ಷದ ಹಳೆಯ ಪುರಾತನ ಐಶಾರಾಮಿ ಶೌಚಾಲಯ ಪತ್ತೆ!
ಮನೆ ಕುಸಿದು 7 ಮಂದಿ ಸಾವು ಪ್ರಕರಣ: ಮೃತರ ಕುಟುಂಬಸ್ಥರಿಗೆ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ
ಮನೆಯ ಗೋಡೆ ಕುಸಿದು ಬಿದ್ದು ಒಂದೇ ಕುಟುಂಬದ ಐವರು ಸಾವು!
ದೂರವಾಗಿದ್ದ ಪತ್ನಿಯ ಬಳಿಗೆ ಬಂದು ಅಪ್ಪಿಕೊಂಡ ಪತಿ | ಕ್ಷಣ ಮಾತ್ರದಲ್ಲಿ ಇಬ್ಬರ ದೇಹವೂ ಛಿದ್ರಛಿದ್ರ!
ಕೇರಳದ ಮೂಲದ ವಿದ್ಯಾರ್ಥಿನಿ ಮಂಗಳೂರಿನ ಹಾಸ್ಟೆಲ್ ನಲ್ಲಿ ಆತ್ಮಹತ್ಯೆ!
ಹಿಂಸೆಗೆ ಪ್ರಚೋದಿಸುವ ದುರುದ್ದೇಶದಿಂದಲೇ ರೈತರ ಹತ್ಯೆ ನಡೆದಿದೆ | ರವಿಕಿರಣ್ ಪೂನಚ