ಅರ್ಜುನ್ ಸರ್ಜಾ ವಿರುದ್ಧದ ‘ಮಿ ಟೂ’  ಪ್ರಕರಣಕ್ಕೆ ಮರುಜೀವ:  ವಿಸ್ಮಯ ಸಿನಿಮಾ ಚಿತ್ರೀಕರಣದ ವೇಳೆಯಲ್ಲೂ ಲೈಂಗಿಕ ದೌರ್ಜನ್ಯ?

arjun sarja
12/09/2021

ಬೆಂಗಳೂರು: ನಟಿ ಶ್ರುತಿ ಹರಿಹರನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಅರ್ಜುನ್ ಸರ್ಜಾ ವಿರುದ್ಧ ದಾಖಲಾಗಿದ್ದ ಪ್ರಕರಣದ ತನಿಖೆ ಮರುಜೀವ ಪಡೆದುಕೊಂಡಿದ್ದು, ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಸಾಕ್ಷಿದಾರರಿಗೆ ಇತ್ತೀಚೆಗೆ ನೋಟಿಸ್ ನೀಡಿದ್ದಾರೆ.

ಶ್ರುತಿ ನೀಡಿದ್ದ ದೂರು ಆಧರಿಸಿ ಸಂಜ್ಞೆ ಮೂಲಕ ಮಹಿಳೆಯ ಗೌರವಕ್ಕೆ ಧಕ್ಕೆ, ಲೈಂಗಿಕ ಕಿರುಕುಳ, ಜೀವ ಬೆದರಿಕೆ ಆರೋಪದಡಿಯಲ್ಲಿ 2018ರಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿ ಹಾಗೂ ಇತರರ ಹೇಳಿಕೆಯನ್ನು ಪೊಲೀಸರು ದಾಖಲಿಸಿಕೊಂಡಿದ್ದರು.

ಇನ್ನೂ ವಿಸ್ಮಯ ಸಿನಿಮಾ ಚಿತ್ರೀಕರಣದ ವೇಳೆಯಲ್ಲಿಯೂ ನಟಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವ ಮಾಹಿತಿ ಇದೆ. ಅದನ್ನು ಖಚಿತಪಡಿಸಿಕೊಳ್ಳಲು ಸಿನಿಮಾ ನಿರ್ದೇಶಕ ಅರುಣ್ ವೈದ್ಯನಾಥನ್, ಛಾಯಗ್ರಾಹಕ ಅರವಿಂದ್ ಕೃಷ್ಣ ಹಾಗೂ  ನಿರ್ಮಾಪಕ ಜಯರಾಮ್ ಅವರಿಂದ ಸಾಕ್ಷಿಯಾಗಿ ಹೇಳಿಕೆ ಪಡೆಯಬೇಕಿದೆ. ಹಲವು ಬಾರಿ ನೋಟಿಸ್ ನೀಡಿದರೂ ಅವರು ವಿಚಾರಣೆಗೆ ಬಂದಿಲ್ಲ. ಹೀಗಾಗಿ ಮತ್ತೆ ನೋಟಿಸ್ ನೀಡಲಾಗಿದೆ ಎಂದು ಪೊಲೀಸ್ ಮೂಲಗಳು ಹೇಳಿರುವುದಾಗಿ ವರದಿಯಾಗಿದೆ.

ಪ್ರಕರಣ ದಾಖಲಾಗುತ್ತಿದ್ದಂತೆ ದೂರುದಾರ, ಆರೋಪಿ ಹಾಗೂ ಸಾಕ್ಷಿದಾರರ ಹೇಳಿಕೆ ಪಡೆಯುವುದು ಕಾನೂನು ಪ್ರಕ್ರಿಯೆಯಾಗಿದೆ. ಸಾಕ್ಷಿದಾರರಿಗೆ ನೋಟಿಸ್ ನೀಡಿರುವುದಕ್ಕೆ ಹೆಚ್ಚು ಒತ್ತು ನೀಡುವ ಅಗತ್ಯವಿಲ್ಲ. ಪ್ರಕರಣದ ತನಿಖೆ ಪ್ರಗತಿಯಲ್ಲಿದೆ ಎಂದು ತಿಳಿಸಿರುವುದಾಗಿ ಹೇಳಲಾಗಿದೆ.

ಇನ್ನಷ್ಟು ಸುದ್ದಿಗಳು…

ಸಿಗರೇಟ್ ನ ಕಪಿ ಮುಷ್ಠಿಯಲ್ಲಿ ಸಿಲುಕಿ ಒದ್ದಾಡಿ ಬಿಟ್ಟಿದ್ದೆ | ಮರೆಯಲಾರದ ಘಟನೆ

ರಸ್ತೆಯಲ್ಲಿ ಮಹಿಳೆಯ ಕೈ ಹಿಡಿದೆಳೆದ ಜೆಡಿಎಸ್ ಮುಖಂಡ!

ಜೈಲಿನಲ್ಲಿ ಮಹಿಳಾ ಪೊಲೀಸ್ ಮುಂದೆ ಬಟ್ಟೆ ಬಿಚ್ಚಿ ನಿಂತು ಕೈದಿಯಿಂದ ಅನುಚಿತ ವರ್ತನೆ!

ಮಂಗಳ ಗ್ರಹದಲ್ಲಿ ಜೀವಿಗಳಿದ್ದವು ಎನ್ನುವುದಕ್ಕೆ ಸಿಕ್ಕಿದೆ ಬಲವಾದ ಸಾಕ್ಷಿ!

ಉದನೆ ಗಣಪತಿ ಕಟ್ಟೆ ಧ್ವಂಸ: ಓರ್ವ ಆರೋಪಿಯನ್ನು ಬಂಧಿಸಿದ ಪೊಲೀಸರು

ಕಾಂಗ್ರೆಸ್ ಮುಂದಿನ ಎರಡು ದಶಕಗಳ ಕಾಲ ಅಧಿಕಾರಕ್ಕೆ ಬರುವ ಕನಸು ಕಾಣುವ ಅಗತ್ಯವಿಲ್ಲ | ನಳಿನ್ ಕುಮಾರ್ ಕಟೀಲ್

ನೀರಲ್ಲಿ ಮುಳುಗಿದ ಮಕ್ಕಳು “ಅಪ್ಪಾ… ಕಾಪಾಡು” ಎಂದು ಕರೆದರೂ ಕಾಪಾಡಲಾಗಲಿಲ್ಲ | ನೊಂದ ತಂದೆಯಿಂದ ಆತ್ಮಹತ್ಯೆ

ಕಾಂಗ್ರೆಸ್ ನ ಕುಟುಂಬ ರಾಜಕಾರಣಕ್ಕೆ ಅಡಿಪಾಯ ಹಾಕಿದ್ದೇ ಇಂದಿರಾ ಗಾಂಧಿ | ನಟ ಚೇತನ್

ಬೈಕ್ ಸ್ಕಿಡ್ ಆಗಿ ಖ್ಯಾತ ನಟನಿಗೆ ಗಂಭೀರ ಗಾಯ: ಅಪೋಲೊ ಆಸ್ಪತ್ರೆಗೆ ದೌಡಾಯಿಸಿದ ಹಿರಿಯ ನಟರು

ಇತ್ತೀಚಿನ ಸುದ್ದಿ

Exit mobile version