ಶಿರೂರು: ಕೊನೆಗೂ ಕೇರಳ ಮೂಲದ ಅರ್ಜುನ್ ನ ಲಾರಿ ನದಿಯ ಆಳದಲ್ಲಿ ಪತ್ತೆ!
ಕಾರವಾರ: ಉತ್ತರ ಕನ್ನಡದ ಶಿರೂರಿನ ಭೂಕುಸಿತದಲ್ಲಿ ಲಾರಿ ಸಹಿತವಾಗಿ ನಾಪತ್ತೆಯಾಗಿದ್ದ ಕೋಝಿಕ್ಕೋಡ್ ಮೂಲದ ಅರ್ಜುನ್ ಅವರ ಲಾರಿ ಎಂದು ನಂಬಲಾದ ಟ್ರಕ್ ನದಿಯ ಆಳದಲ್ಲಿ ಇರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಟ್ರಕ್ ನದಿಯ ಆಳದಲ್ಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಸಾಮಾಜಿಕ ಜಾಲತಾಣ X ನಲ್ಲಿ ಮಾಹಿತಿ ನೀಡಿದ್ದಾರೆ. ನದಿಯ ಕೆಳಭಾಗದಲ್ಲಿ ಟ್ರಕ್ ಪತ್ತೆಯಾಗಿದೆ ಎಂದು ತಿಳಿದು ಬಂದಿದ್ದು, ಇದೀಗ ಶೋಧ ಕಾರ್ಯಾಚರಣೆ ತೀವ್ರಗೊಂಡಿದೆ.
ಶಿರೂರಿನಲ್ಲಿ ಕಳೆದ 9 ದಿನಗಳಿಂದ ನಿರಂತರ ಕಾರ್ಯಾಚರಣೆ ನಡೆಯುತ್ತಿದೆ. ತೀವ್ರ ಗಾಳಿ ಮಳೆ ಹಾಗೂ ಉಕ್ಕಿ ಬರುತ್ತಿರುವ ನೀರಿನ ನಡುವೆಯೂ ಕಾರ್ಯಾಚರಣೆ ನಡೆಯುತ್ತಲೇ ಇದೆ.
ಇಂದು ಬೆಳಗ್ಗೆ ಬೂಮ್ ಲೆಂಗ್ತ್ ಕ್ರೇನ್ ಬಂದಿದ್ದು, ತಪಾಸಣೆ ಪುನರಾರಂಭವಾದ ಬೆನ್ನಲ್ಲೇ ಕಾರ್ಯಾಚರಣೆಗೆ ಇನ್ನಷ್ಟು ಬಲ ಬಂದಿದೆ. ಈ ಯಂತ್ರವು 60 ಅಡಿ ಆಳದವರೆಗೆ ಹುಡುಕಬಲ್ಲ ಸಾಮರ್ಥ್ಯ ಹೊಂದಿದೆ. ಪೊಲೀಸ್ ವಾಹನದೊಂದಿಗೆ ವಾಹನವನ್ನು ಸ್ಥಳಕ್ಕೆ ತರಲಾಗಿದೆ.
ಜುಲೈ 16 ರಂದು ಬೆಳಿಗ್ಗೆ ಕೋಝಿಕ್ಕೋಡ್‌ನ ಕಂಡ್ಯಕ್ಕಲ್ ಮೂಲದ ಅರ್ಜುನ್ (30) ಕರ್ನಾಟಕ-ಗೋವಾ ಗಡಿಯಲ್ಲಿ ಹಾದು ಹೋಗುವ ಪನ್ವೇಲ್-ಕನ್ಯಾಕುಮಾರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತದ ವೇಲೆ ಲಾರಿ ಸಹಿತವಾಗಿ ಕಣ್ಮರೆಯಾಗಿದ್ದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: