ಆರೋಗ್ಯ ನಿಧಿ ಯೋಜನೆ ರದ್ಧು: ಕೊರಗ ಸಮುದಾಯಕ್ಕೆ ಎಸಗಿರುವ ದ್ರೋಹ: ಹರೀಶ್ ಕಿಣಿ
ಉಡುಪಿ: ಯುಪಿಎ ಸರಕಾರ ಕೊರಗ ಸಮುದಾಯಕ್ಕೆ ಜಾರಿಗೆ ತಂದಿದ್ದ ಆರೋಗ್ಯ ನಿಧಿ ಯೋಜನೆಯನ್ನು ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಸಮಾಜ ಕಲ್ಯಾಣ ಇಲಾಖೆಯ ಮೂಲಕ ರದ್ದುಗೊಳಿಸಿ ಆದೇಶಿಸಿರುವುದು ಕೊರಗ ಸಮುದಾಯಕ್ಕೆ ಎಸಗಿರುವ ದ್ರೋಹವಾಗಿದ್ದು, ಕೂಡಲೇ ಈ ಆದೇಶವನ್ನು ರದ್ದುಗೊಳಿಸಬೇಕು ಎಂದು ಕೆಪಿಸಿಸಿ ಸಂಯೋಜಕ ಹರೀಶ್ ಕಿಣಿ ಆಗ್ರಹಿಸಿದ್ದಾರೆ.
ಉಡುಪಿಯಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ತನ್ನ ಹಿಡನ್ ಅಜೆಂಡಾವನ್ನು ಈ ಮೂಲಕ ಅನುಷ್ಠಾನಗೊಳಿ ಸಲು ಹೊರಟಂತಿದೆ. ಇದರ ವಿರುದ್ಧ ಮುಂದಿನ ದಿನಗಳಲ್ಲಿ ಕೊರಗ ಸಮುದಾಯದವರೊಂದಿಗೆ ಸೇರಿ ಕಾಂಗ್ರೆಸ್ ಪಕ್ಷ ಹೋರಾಟ ನಡೆಸಲಿದೆ ಎಂದು ಎಚ್ಚರಿಕೆ ನೀಡಿದರು.
ಈಗಾಗಲೇ ಅಲ್ಪಸಂಖ್ಯಾತರ ಮೇಲೆ ಹಲವು ಸಂವಿಧಾನಿಕ ಕ್ರಮ ಕೈಗೊಂಡಿರುವ ಬಿಜೆಪಿ ಸರಕಾರ ಇದೀಗ ಮುಗ್ಧ, ಆರ್ಥಿಕವಾಗಿ ಹಿಂದುಳಿದಿರುವ ಅವಿಭಜಿತ ದ.ಕ. ಜಿಲ್ಲೆಯಲ್ಲಿ ಕೇವಲ 15-16ಸಾವಿರ ಜನಸಂಖ್ಯೆ ಇರುವ ಪರಿಶಿಷ್ಟ ಪಂಗಡದ ಕೊರಗ ಜನಾಂಗದ ಜನರಿಗೆ ಗೌರವಯುತವಾಗಿ ಬದುಕಲು ತೊಂದರೆಯೊಡ್ಡುತ್ತಿದೆ. ಅವರ ಆಹಾರ ಕ್ರಮದ ಬಗ್ಗೆ ಈಗಾಗಲೇ ಪರಿವಾರ ಸಂಘಟನೆಗಳ ಮೂಲಕ ತಡೆಯೊಡ್ಡುತ್ತಿದ್ದು, ಈಗ ವೈದ್ಯಕೀಯ ನೆರವಿನ ಯೋಜನೆಯನ್ನು ಕೂಡ ಕಸಿದುಕೊಂಡಿದೆ ಎಂದು ಅವರು ಆರೋಪಿಸಿದರು.
ಎಸ್ ಸಿ, ಎಸ್ ಟಿ ಸಮುದಾಯದ ಬಿಪಿಎಲ್ ಪಡಿತರ ಚೀಟಿ ಹೊಂದಿರುವ ವರಿಗೆ 75 ಯುನಿಟ್ ವಿದ್ಯುತ್ ಉಚಿತವಾಗಿ ನೀಡುವುದಾಗಿ ಭರವಸೆ ನೀಡಿ, ಅವರು ತಮ್ಮ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹಾಗೂ ಇನ್ನಿತರ ದಾಖಲೆಗಳನ್ನು ಸಲ್ಲಿಸಿದ ಬಳಿಕ ಆ ಯೋಜನೆ ಹಿಂಪಡೆಯಲಾಗಿದೆ ಎಂದು ಹೊಸ ಆದೇಶ ಹೊರಡಿಸಲಾಗಿದೆ. ಇದು ಕೊರಗ ಹಾಗೂ ಎಸ್ ಸಿ, ಎಸ್ ಟಿ ಸಮುದಾಯಕ್ಕೆ ಮಾಡಿರುವ ಅನ್ಯಾಯ. ಈ ಎಲ್ಲ ಜನ ವಿರೋಧಿ ಆದೇಶಗಳನ್ನು ಕೈಬಿಡಬೇಕು ಎಂದು ಅವರು ಒತ್ತಾಯಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಅಲೆವೂರು ಗ್ರಾಪಂ ಅಧ್ಯಕ್ಷೆ ಪುಷ್ಪಾ ಅಂಚನ್, ಮಾಜಿ ತಾಪಂ ಸದಸ್ಯ ಲಕ್ಷ್ಮೀನಾರಾಯಣ ಪ್ರಭು, ಕಾಂಗ್ರೆಸ್ ಮುಖಂಡ ಸತೀಶ್ ಕುಮಾರ್ ಹಾಜರಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka